ಜಮ್ಮು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಕರಾವಳಿ ಕರ್ನಾಟಕ ವರದಿ

ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಕರಣ್‌ ನಗರದ ಸಿಆರ್‌ಪಿಎಫ್‌ ಕ್ಯಾಂಪ್‌ ಬಳಿಯಲ್ಲಿ ಉಗ್ರರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯು ಅಂತಿಮಗೊಂಡಿದ್ದು, ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಡಗಿದ್ದ ಉಗ್ರರರ ವಿರುದ್ಧ ಭದ್ರತಾ ಪಡೆಗಳು 24 ಗಂಟೆಗಳ ಕಾರ್ಯಾಚರಣೆ ನಡೆಸಿದ್ದು, ಸದ್ಯ ಕಾರ್ಯಾಚರಣೆ ಮುಕ್ತಾಯವಾಗಿದೆ. ಸಿಆರ್‌ಪಿಎಫ್ ಕ್ಯಾಂಪ್‌ ಮೇಲೆ ಲಷ್ಕರ್‌ ಉಗ್ರರ ದಾಳಿ ಯತ್ನ ಸೋಮವಾರ ಆರಂಭಗೊಂಡಿತ್ತು.

ಒಂದು ದಿನ ಪೂರ್ತಿ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿತ್ತು. ಕರಣ್‌ ನಗರ ಪ್ರದೇಶದಲ್ಲಿನ ನಿರ್ಮಾಣ ಹಂತದಲ್ಲಿದ್ದ ಕಟ್ಟಡದೊಳಗೆ ಉಗ್ರರು ಅಡಗಿಕೊಂಡಿದ್ದರು. ಅವರನ್ನು ಬೆನ್ನಟ್ಟಿ ಗುಂಡಿಟ್ಟು ಸಾಯಿಸಲಾಯಿತು ಎಂದು ಕಾಶ್ಮೀರ ಐಜಿಪಿ ಎಸ್‌ ಪಿ ಪಾಣಿ ತಿಳಿಸಿದ್ದಾರೆ.

ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಪೊಲೀಸ್ ಗಾಯಗೊಂಡಿದ್ದಾರೆ.

ಇಂದು ಓದಿದ ಹೆಚ್ಚು ಸುದ್ದಿಗಳು
►►ಎಪಿಎಂಸಿ ಅಧ್ಯಕ್ಷರ ಚುನಾವಣೆ: ಬಿಜೆಪಿ ಸದಸ್ಯ ಕಿಡ್ನ್ಯಾಪ್:
http://bit.ly/2EYMtTq
►►ಸಾಗರದಾಳದಲ್ಲಿ ಸ್ಕೂಬಾ ಡೈವಿಂಗ್ ಮೂಲಕ ದಂಪತಿಯ 'ಹ್ಯಾಪಿ ಆನಿವರ್ಸರಿ': http://bit.ly/2HaKrQJ
►►ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಭೀಕರ ಸ್ಫೋಟ: ಐವರು ಮೃತ್ಯು, 11 ಮಂದಿ ಗಂಭೀರ: http://bit.ly/2sqH2df
►►ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗು ಮೃತ್ಯು: http://bit.ly/2EABNfX
►►ಮಗನನ್ನು ಚೂರಿಯಿಂದ ಇರಿದು ಕೊಲೆಗೈದ ತಂದೆ ಪೊಲೀಸ್ ಬಲೆಗೆ: http://bit.ly/2nZOaYB
►►ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ್​ ಕಂಬಾರ: http://bit.ly/2BTKgKa

Related Tags: 2 Terrorists Killed, Srinagar Encounter, Karan Nagar, CRPF Jawan Killed, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ