ನಲಪಾಡ್‌ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ ಆಸ್ಪತ್ರೆಯಿಂದ ಬಿಡುಗಡೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಶಾಸಕ ಹ್ಯಾರಿಸ್ ಪುತ್ರ ನಲಪಾಡ್‌ನಿಂದ ಗಂಭೀರ ಹಲ್ಲೆಗೊಳಗಾಗಿದ್ದ ವಿದ್ವತ್ 15 ದಿನಗಳ ಬಳಿಕ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಲಪಾಡ್‌ನಿಂದ ಹಲ್ಲೆಗೊಳಗಾದ ವಿದ್ವತ್ ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ವಿದ್ವತ್ ಕಣ್ಣಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದ್ದು, ಆಯುರ್ವೇದಿಕ್ ಔಷಧಿ ಕೊಡಿಸಲು ಕೇರಳಕ್ಕೆ ಹೋಗುವುದಾಗಿ ಕುಟುಂಬಿಕರು ತಿಳಿಸಿದ್ದಾರೆ.

ಫೆ.17ರಂದು ಬೆಂಗಳೂರಿನ ಯು.ಬಿ.ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್‌ ಮತ್ತು ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ನನ್ನ ತಮ್ಮನ ಮೇಲೆ ಮಾತ್ರವಲ್ಲ ನನ್ನ ಮೇಲೂ ನಲಪಾಡ್ ಮತ್ತು ಆತನ ಗ್ಯಾಂಗ್ ಹಲ್ಲೆ ಮಾಡಿತ್ತು. ಹಲ್ಲೆ ವಿಚಾರ ತಿಳಿದ ನಾನು ನೇರವಾಗಿ ವಿದ್ವತ್ ಚಿಕಿತ್ಸೆಗೆ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ತೆರಳಿದ್ದೆ.  ವಿದ್ವತ್ ನೋಡಲು ಆಸ್ಪತ್ರೆಗೆ ಬಂದಾಗ ಅಲ್ಲಿಗೂ ಆಗಮಿಸಿದ್ದ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿದರು ಎಂದು ಸಿಸಿಬಿ ಪೊಲೀಸರ ಮುಂದೆ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಮಾಹಿತಿ ನೀಡಿದ್ದರು.

Related Tags: Mohammed Nalapad, Vidwath, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ