ರಾಜ್ಯಸಭೆ: ಜೆಡಿಎಸ್ ಜೊತೆ ಮೈತ್ರಿಗೆ ಸಿಎಂ ಸಿದ್ದರಾಮಯ್ಯ ವಿರೋಧ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿಯನ್ನು ನಿಲ್ಲಿಸುವ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸಭೆ ಚುನಾವಣೆ ಎದುರಿರುವಾಗ ಮೈತ್ರಿ ಮಾಡಿಕೊಂಡರೆ ಜನರಿಗೆ ತಪ್ಪು ಸಂದೇಶ ರವಾನೆ ಮಾಡಿದಂತೆ ಆಗುತ್ತದೆ. ಇದರಿಂದ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರದು. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಗೆ ರಾಜ್ಯದ ಜನ ಮತ ಹಾಕುವುದಿಲ್ಲ ಎಂಬ ವಿಶ್ವಾಸವಿದೆ.

ಕೋಮುವಾದಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ. ಬಿಜೆಪಿ ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡುವ ಅಗತ್ಯವಿದೆ ಎಂದು ಸಿಎಂ ಹೇಳಿದರು.

ವಿಧಾನಸಭೆ ಬಲಾಬಲದ ಆಧಾರದ ಮೇಲೆ ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳುಹಿಸಬಹುದಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಪಕ್ಷದ 7 ಶಾಸಕರ ಬೆಂಬಲವೂ ಇದ್ದು, ಒಟ್ಟು ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ. ಒಬ್ಬ ಅಭ್ಯರ್ಥಿ ಗೆಲುವಿಗೆ 45 ಮತಗಳು ಬೇಕಾಗಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್‌ 120ಕ್ಕೂ ಅಧಿಕ ಶಾಸಕ ಬಲ ಹೊಂದಿದೆ. ಜೆಡಿಎಸ್‌ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಕಾಂಗ್ರೆಸ್ ಜೊತೆ ಇದ್ದಾರೆ. ಆದ್ದರಿಂದ, ಕಾಂಗ್ರೆಸ್ 3 ಅಭ್ಯರ್ಥಿಗಳನ್ನು ಗೆಲ್ಲಿಸಬಹುದಾಗಿದೆ.

ಮೈತ್ರಿ ಮಾಡಿಕೊಂಡು ಜೆಡಿಎಸ್‌ ಬೆಂಬಲಿಸುವುದಕ್ಕಿಂತ ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿ ಗೆಲ್ಲಿಸುವುದು ಕಾಂಗ್ರೆಸ್ ತಂತ್ರವಾಗಿದೆ.

ಇಂದು ಓದಿದ ಹೆಚ್ಚು ಸುದ್ದಿಗಳು:
►►ತಮಿಳುನಾಡಿನಲ್ಲಿ ನಾಯಕತ್ವದ ಕೊರತೆ ನಾನು ತುಂಬುವೆ: ರಜನಿಕಾಂತ್:
http://bit.ly/2Fj8n32
►►ಕುಂದಾಪುರದ ಗುರುರಾಜ್ ಪೂಜಾರಿ ಸೇರಿದಂತೆ 13 ಸಾಧಕರಿಗೆ ಏಕಲವ್ಯ ಪ್ರಶಸ್ತಿ: http://bit.ly/2tkmBPT
►►ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ: ಸಂಸದ ನಳಿನ್ ಕಟೀಲ್: http://bit.ly/2oJRNTX
►►ಮಠಮಂದಿರಗಳು ಉಳಿಯಬೇಕಾದರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು: ಶೋಭಾ ಕರಂದ್ಲಾಜೆ: http://bit.ly/2tgI1x9
►►ಆಸ್ಕರ್‌ ಪ್ರಶಸ್ತಿ ಪ್ರಕಟ: 'ದಿ ಶೇಪ್‌ ಆಫ್‌ ವಾಟರ್‌' ಅತ್ಯುತ್ತಮ ಚಿತ್ರ: http://bit.ly/2CYeTdK
►►ಮತದಾರರ ಮೌಲ್ಯಮಾಪನ: ಪ್ರಜಾವಾಣಿ ಸಮೀಕ್ಷೆಯಲ್ಲಿ ಪ್ರಮೋದ್ ಪ್ರಥಮ, ಪೂಜಾರಿ ದ್ವಿತೀಯ!: http://bit.ly/2CXG8oN

Related Tags: Siddharamaiah, Rajya Sabha, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ