ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ; ಆರೋಪಿ ತೇಜಸ್ ಶರ್ಮಾ ಬಂಧನ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲೋಕಾಯುಕ್ತ ಕಚೇರಿಗೆ ಬಂದಿದ್ದ ತುಮಕೂರು ಮೂಲದ ಆರೋಪಿ ತೇಜಸ್ ಶರ್ಮಾ ವಿಶ್ವನಾಥ್ ಶೆಟ್ಟಿ ಅವರಿಗೆ ಚೂರಿ ಇರಿದಿದ್ದಾನೆ.

ಚೂರಿ ಇರಿತದಿಂದ ವಿಶ್ವನಾತ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪ್ರಕರಣ ವಿಚಾರಣೆ ಸಂಬಂಧ ತೇಜಸ್ ಶರ್ಮಾ ಲೋಕಾಯುಕ್ತ ಕಚೇರಿಗೆ ಬಂದಿದ್ದು ಈ ವೇಳೆ ಆತ ಮೂರು ಬಾರಿ ಲೋಕಾಯುಕ್ತರಿಗೆ ಚೂರಿ ಇರಿದಿದ್ದು ಇರಿತದ ತೀವ್ರತೆಗೆ ಚಾಕು ಮುರಿದು ಹೋಗಿದೆ ಎನ್ನಲಾಗಿದೆ.

ಸದ್ಯ ಆರೋಪಿ ತೇಜಸ್ ಶರ್ಮಾನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ