ಸಮುದ್ರದಲ್ಲಿ ಒತ್ತಡ: ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಬಂಗಾಳಕೊಲ್ಲಿಯ ತಮಿಳುನಾಡು ಮತ್ತು ಶ್ರೀಲಂಕಾ ಮಧ್ಯೆ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ದ.ಕ. ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.

ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದಲ್ಲಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿ ಸಮುದ್ರ ಅಲೆಗಳ ಎತ್ತರ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಸಕ್ತ ಈ ಸಮುದ್ರ ಒತ್ತಡ ದಕ್ಷಿಣ ಶ್ರೀಲಂಕಾದಿಂದ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳಲ್ಲಿ ಕೇರಳ ಕರಾವಳಿ ತೀರದಲ್ಲಿ 2.5 ರಿಂದ 3.2 ಮೀಟರ್‌ವರೆಗೆ ಸಮುದ್ರ ಅಲೆಗಳು ಏರಿಕೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಬೋಟುಗಳು ಸಮುದ್ರದಲ್ಲಿ ಬಲೆಗಳನ್ನು ಹಾಕದಂತೆ ಹಾಗೂ ಅಧಿಕ ಭಾರದ ವಸ್ತುಗಳನ್ನು ಬೋಟಿನ ಡೆಕ್ ಮೇಲೆ ಇಡದಂತೆ ಸೂಚಿಸಲಾಗಿದೆ.

ಸಮುದ್ರದಲ್ಲಿ ಬೋಟುಗಳು ಒಬ್ಬಂಟಿಯಾಗಿ ಮೀನುಗಾರಿಕೆಯಲ್ಲಿ ತೊಡಗುವ ಬದಲು ಹಲವು ಬೋಟುಗಳು ಆಸುಪಾಸಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿದರೆ ಅಪಾಯದ ತುರ್ತು ಸಂದರ್ಭದಲ್ಲಿ ನೆರವು ನೀಡಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಇಂದು ಓದಿದ ಹೆಚ್ಚು ಸುದ್ದಿಗಳು
►►ಕಾರವಾರದಲ್ಲೊಂದು ವಿಶೇಷ ಜಾತ್ರೆ: ಇಲ್ಲಿ ದೇವರಿಗೆ ಹೆಂಡವೇ ನೈವೇದ್ಯ:
http://bit.ly/2FBYrSI
►►ಮಧುಮೇಹ, ಬಿಪಿ ಇದ್ದರೆ ಇನ್ನು ಕುವೈಟ್‌ನಲ್ಲಿ ಕೆಲಸವಿಲ್ಲ: http://bit.ly/2HoNBQg
►►ರೈತನ ಉತ್ಸಾಹದ ನೃತ್ಯವನ್ನು ಸಿದ್ದರಾಮಯ್ಯ ನೃತ್ಯ ಎಂದು ಗೇಲಿ ಮಾಡಿದ ಹೆಗಡೆ ಅಭಿಮಾನಿಗಳು!: http://bit.ly/2Hq5Kx0
►►ಗೋಮಾಂಸ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ: ಸಿಎಂ ಸಿದ್ದರಾಮಯ್ಯ: http://bit.ly/2tFRkam
►►ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆಗೆ ಫೇಸ್​ಬುಕ್​ನಲ್ಲಿ ಕಿರುಕುಳ: http://bit.ly/2tHATub
►►ನೀವು ನನ್ನನ್ನು ಪ್ರಶ್ನಿಸುವಂತೆ ನರೇಂದ್ರ ಮೋದಿಯವರನ್ನು ಪ್ರಶ್ನಿಸಲಾರಿರಿ: ರಾಹುಲ್ ಗಾಂಧಿ: http://bit.ly/2oXCRli 

Related Tags: Fishermen Warned, Low Pressure, Strong Winds, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ