ಹಿರಿಯ ನಟಿ ಜಯಂತಿ ಅಸ್ವಸ್ಥ: ಎರಡನೇ ದಿನವೂ ಮುಂದುವರಿದ ಚಿಕಿತ್ಸೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಕನ್ನಡ ಚಿತ್ರರಂಗದ ಹಿರಿಯ ನಟಿ, ಪಂಚಭಾಷಾ ತಾರೆ ಜಯಂತಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಕಾರಣ ಸೋಮವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಕೂಡ ಚಿಕಿತ್ಸೆ ಮುಂದುವರಿದಿದೆ.

35 ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದ ಅವರಿಗೆ ಇತ್ತೀಚಿನ ದಿನಗಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗಿತ್ತು. ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಮೊದಲು ಬೆಂಗಳೂರಿನ ಸಿದ್ವಿನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ವೈದ್ಯರ ಸಲಹೆ ಮೇರೆಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟ ಅಳವಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿನಿಮಾ ಕಲಾವಿದರಾದ ತಾರ, ಬಿ ಸರೋಜದೇವಿ, ಲೀಲಾವತಿ ಹಾಗೂ ವಿನೋದ್ ರಾಜ್, ಹೇಮಾ ಚೌದರಿ, ಹುಚ್ಚ ವೆಂಕಟ್ ಹಾಗೂ ಭಗವಾನ್ ಇನ್ನೂ ಅನೇಕರ ನಟ-ನಟಿಯರು ಜಯಂತಿ ಅವರ ಆರೋಗ್ಯ ವಿಚಾರಿಸಿದ್ದಾರೆ.

73 ವರ್ಷದ ಹಿರಿಯ ನಟಿ ಜಯಂತಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಮರಾಠಿ ಭಾಷೆಯ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ವರನಟ ಡಾ.ರಾಜ್ ಕುಮಾರ್ ಜೊತೆಗೆ ಅತಿ ಹೆಚ್ಚು ಚಿತ್ರಗಳಲ್ಲಿ ನಾಯಕಿ ಆಗಿ ಅಭಿನಯಿಸಿರುವ ಖ್ಯಾತಿ ಕೂಡ ಜಯಂತಿ ಅವರಿಗೆ ಸಲ್ಲುತ್ತದೆ. ಡಾ.ರಾಜ್ ಕುಮಾರ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್ ಫೇರ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನಟಿ ಜಯಂತಿ ಮುಡಿಗೇರಿಸಿಕೊಂಡಿದ್ದಾರೆ.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಇಂದು ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ:
http://bit.ly/2GfcWfo
►►ಸಿದ್ದರಾಮಯ್ಯ ಸಾಧನೆಗೆ ಎಲ್ಲೆಡೆ ಮೆಚ್ಚುಗೆ. ರಾಜ್ಯದಲ್ಲಿ ಮತ್ತೆ ಕೈ ಸರ್ಕಾರ: ಸಿ-ಫೋರ್ ಸಮೀಕ್ಷೆ: http://bit.ly/2G4y8IS
►►ಪತ್ನಿಗೆ ವಂಚನೆ: ನಾಡ ಗ್ರಾಮದ ಯುವಕನ ವಿದೇಶ ಪ್ರಯಾಣಕ್ಕೆ ಕೋರ್ಟ್ ತಡೆ: http://bit.ly/2pFSnCu
►►ಕುಂದಾಪುರ: ಭರದಿಂದ ಸಾಗುತ್ತಿದೆ ಇಂದಿರಾ ಕ್ಯಾಂಟೀನ್ ನಿರ್ಮಾಣ: http://bit.ly/2DVRV7q
►►6.07ಲಕ್ಷ ರೂ. ವೇತನ ನೀಡದ ಆಸ್ಕರ್: ಸಂತ್ರಸ್ತರಿಂದ ಉಪವಾಸ ಸತ್ಯಾಗ್ರಹ ಎಚ್ಚರಿಕೆ: http://bit.ly/2upUTSk
►►ಗಂಗೊಳ್ಳಿ ಮಹಿಳೆಯ ಕೊಲೆ ಪ್ರಕರಣ: ಅಪರಾಧಿಗೆ ಜೀವಿತಾವಧಿ ಜೈಲು: http://bit.ly/2pGZytp

Related Tags: Actress Jayanthi, Breathing Problem, Hospitalized, Vikram Hospital, Kannada Actress, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ