ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಅಸಮಾಧಾನ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ದೇಶಾದ್ಯಂತ ತೀವ್ರ ಪ್ರತಿಭಟನೆಗಳಿಗೆ ಕಾರಣವಾಗಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ದೋಷಾರೋಪ ಪಟ್ಟಿಯಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲಿಸದಿರುವುದಕ್ಕೆ ಕಾರಣವೇನೆಂದು ತನಿಖಾಧಿಕಾರಿಗಳಿಂದ ಮಾಹಿತಿ ಪಡೆದು ಕೋರ್ಟ್‌ಗೆ ಒದಗಿಸುವಂತೆ ಸಿಬಿಐ ಪರ ವಕೀಲರಿಗೆ ಹೈಕೋರ್ಟ್‌ ಸೂಚಿಸಿದೆ.

ಸಿಬಿಐ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಪೊಲೀಸರ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಎಂಬ ಕಾರಣಕ್ಕೆ ತನಿಖೆಯನ್ನು ಸಿಐಡಿಗೆ, ಆ ಬಳಿಕ ಸಿಬಿಐಗೆ ವಹಿಸಲಾಗಿದೆ. ಸಿಬಿಐ ತನಿಖೆಯೂ ಅನುಮಾನಾಸ್ಪದವಾಗಿರುವಂತಿದೆ. ನಿಮ್ಮಿಂದ ಸೂಕ್ತ ತನಿಖೆ ನಡೆಸಿಸಲು ಸಾಧ್ಯವಿಲ್ಲ ಎಂದಾದರೆ ನ್ಯಾಯಾಲಯವೇ ವಿಶೇಷ ತನಿಖಾ ತಂಡ ರಚಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ದೋಷಾರೋಪ ಪಟ್ಟಿಯಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲಿಸದಿರುವುದಕ್ಕೆ ಕಾರಣವೇನೆಂದು ತನಿಖಾಧಿಕಾರಿಗಳಿಂದ ಮಾಹಿತಿ ಪಡೆದು ಕೋರ್ಟ್‌ಗೆ ಒದಗಿಸಿ ಎಂದು ಸಿಬಿಐ ಪರ ವಕೀಲರಿಗೆ ಸೂಚಿಸಿ ಅರ್ಜಿ ವಿಚಾರಣೆ‌ಯನ್ನು ಏ.17ಕ್ಕೆ ಮುಂದೂಡಿದೆ. ಸೌಜನ್ಯ ಅವರ ತಂದೆ ಪ್ರಕರಣದ ಮರು ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಸಂಬಂಧ ಮೊದಲು ತನಿಖೆ ನಡೆಸಿದ್ದ ಬೆಳ್ತಂಗಡಿ ಪೊಲೀಸರ ಮುಂದೆ ಹರೀಶ್ ಹಾಗೂ ಗೋಪಾಲ್ ಎಂಬುವರು ಸಾಕ್ಷ್ಯ ನುಡಿದಿದ್ದರು. ಆದರೆ, ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ಸಿಬಿಐ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದರೆ, ದೋಷಾರೋಪ ಪಟ್ಟಿಯಲ್ಲಿ ಆ ಇಬ್ಬರ ಹೇಳಿಕೆಯನ್ನೂ ಉಲ್ಲೇಖಿಸಲಾಗಿಲ್ಲ ಎಂದು ಚಂದ್ರಪ್ಪ ಗೌಡ ಪರ ವಕೀಲರು ವಾದ ಮಂಡಿಸಿದ್ದರು.

ಕಾಲೇಜಿನಿಂದ ಮನೆಗೆ ಹೊರಟ ಧರ್ಮಸ್ಥಳ ಕ್ಷೇತ್ರದ ಬಳಿಯ ಪಾಂಗಾಳದ, ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯಾ (17) ಮನೆಗೆ ಹೋಗಲೇ ಇಲ್ಲ. ರಾತ್ರಿಯಾದರೂ ಮನೆಗೆ ಬಾರದ ಪುತ್ರಿಯನ್ನು ಮನೆಯವರು ರಾತ್ರಿಯಿಡೀ ಹುಡುಕಿದರೂ ಸಿಗಲಿಲ್ಲ.

ಮರುದಿನ ಬೆಳಿಗ್ಗೆಯೂ ಹುಡುಕಾಟ ಮುಂದುವರಿಸಿದಾಗ ಮಧ್ಯಾಹ್ನದ ವೇಳೆಗೆ ನೇತ್ರಾವತಿ ಸ್ನಾನ ಘಟ್ಟದಿಂದ ಅನತಿ ದೂರದಲ್ಲಿ ಮುಖ್ಯ ರಸ್ತೆಯಿಂದ ಬಲ ತಿರುವು ಮೂಲಕ ಪಾಂಗಾಳಕ್ಕೆ ಹೋಗುವ ರಸ್ತೆ ಬದಿಯ ಕಾಡಿನಲ್ಲಿ ಶವ ಸಿಕ್ಕಿತ್ತು.

ಇಂದು ಓದಿದ ಹೆಚ್ಚು ಸುದ್ದಿಗಳು:
►►ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ: ಯಡಿಯೂರಪ್ಪ:
http://bit.ly/2H7T5Ta
►►ಬೆಳಿಗ್ಗೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ. ಸಂಜೆ ಪುನಃ ಕಾಂಗ್ರೆಸಿಗೆ: ಇದು ಫಾಸ್ಟ್ ಪಕ್ಷಾಂತರ!: http://bit.ly/2qg3rql
►►ಇನ್ನೋವಾ-ಓಮ್ನಿ ನಡುವೆ ಭೀಕರ ಅಪಘಾತ: ತಾಯಿ-ಮಗ ದಾರುಣ ಸಾವು: http://bit.ly/2qhARE4
►►ಕಾರು ಢಿಕ್ಕಿಯಾಗಿ ಸಾವು-ಬದುಕಿನ ಹೋರಾಟ ನಡೆಸಿದ ವಿದ್ಯಾರ್ಥಿನಿ ಮೃತ್ಯು: http://bit.ly/2EvIDiY
►►ವರುಣಾ ಕ್ಷೇತ್ರದ ಮುಖಂಡರ ಜೊತೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾತುಕತೆ: http://bit.ly/2EwLNmu
►►ಬಿಜೆಪಿ ಶಾಸಕನಿಂದ ಅತ್ಯಾಚಾರ: ಯೋಗಿ ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: http://bit.ly/2qdFA9U
►►ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಪತ್ರಕರ್ತನ ಸ್ಥಿತಿ ಚಿಂತಾಜನಕ: http://bit.ly/2GLI5XW
►►ರಾಯಲ್ ಚಾಲೆಂಜರ್ಸ್ ವಿರುದ್ದ ಕೊಲ್ಕತ್ತ ನೈಟ್​ ರೈಡರ್ಸ್‌ಗೆ ಜಯ: http://bit.ly/2v032ND
►►ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕುಂದಾಪುರಕ್ಕೆ ಹಾಲಾಡಿ ಫೈನಲ್!: http://bit.ly/2GJZsbG

Related Tags: Sowjanya Case, High Court, Bangalore, Dharmasthala, Ujire, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ