ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ: ಅನಂತ ಹೆಗಡೆಗೆ ಪ್ರಕಾಶ್ ರೈ ಸವಾಲು

ಕರಾವಳಿ ಕರ್ನಾಟಕ ವರದಿ

ವಿಜಯಪುರ:
ಸಚಿವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಸಂದರ್ಭದಲ್ಲಿ ಅದನ್ನು ವಿರೋಧಿಸಿದಾಗ ನನ್ನನ್ನು ಹಿಂದೂ ವಿರೋಧಿ ಎಂದು ಜರಿದರು. ಸಂವಿಧಾನ ಬದಲಾವಣೆ ಮಾಡಬೇಡಿ ಎಂದರೆ ತಂದೆ ತಾಯಿ, ರಕ್ತ, ಹುಟ್ಟಿನ ಬಗ್ಗೆ ಮಾತನಾಡುತ್ತಾರೆ. ಅನಂತಕುಮಾರ್ ಹೆಗಡೆಯವರೆ ಧೈರ್ಯ ಇದ್ದರೆ ಬನ್ನಿ. ಒಂದೇ ವೇದಿಕೆಯಲ್ಲಿ ಎದುರು ಬದುರು ಕುಳಿತು ಚರ್ಚೆ ಮಾಡೋಣ ಎಂದು ಬಹುಭಾಷಾ ನಟ ಪ್ರಕಾಶ ರೈ ಸವಾಲು ಹಾಕಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್ ಶಾ, ಅನಂತಕುಮಾರ ಹೆಗ್ಡೆ ಅಂಥವರನ್ನು ನಾನು ವಿರೋಧಿಸುತ್ತೇನೆ. ನಾನು ಧರ್ಮದ ಬಗ್ಗೆ ಮಾತಾಡುತ್ತಿಲ್ಲ. ಇಂತಹ ರಾಕ್ಷಸರ ಬಗ್ಗೆ ಮಾತನಾಡುತ್ತೇನೆ ಎಂದು ಕಿಡಿ ಕಾರಿದರು.

ತಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ ರೈ, ನನಗೆ ರಾಜಕೀಯ ಬೇಡ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುತ್ತೇನೆ. ಸಾಕಷ್ಟು ಹಣ, ಹೆಸರು ಮಾಡಿದ್ದೇನೆ. ಸದ್ಯ ಪ್ರಜೆಗಳಿಗೆ ಧ್ವನಿ ಇಲ್ಲ. ರಾಜಕೀಯ ಬಿಟ್ಟು ಅವರ ಧ್ವನಿಯಾಗಬೇಕಿದೆ ಎಂದರು.

ಕಾವೇರಿ ನದಿಯ ಮೂಲವನ್ನು ರಕ್ಷಿಸುವ ಕೆಲಸ ಯಾರೂ ಮಾಡುತ್ತಿಲ್ಲ. ಕಾವೇರಿಯ ಕಾಡನ್ನು ರಕ್ಷಿಸುತ್ತಿಲ್ಲ, ಕಾವೇರಿ ತಟದಲ್ಲಿ ನಡೆಯುವ ಮರಳುಗಾರಿಕೆ ನಿಲ್ಲಿಸುವ ಕೆಲಸ ಯಾರೂ ಮಾಡುತ್ತಿಲ್ಲ ಎಂದು ಹೇಳಿ ಎಲ್ಲಾ ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದರು.

ಕಾವೇರಿ ನದಿಯ ವಿಚಾರವಾಗಿ ತಜ್ಞರೊಂದಿಗೆ ಮಾತನಾಡಿದ್ದೇನೆ. ನದಿಯ ಪಾತ್ರ ಎಷ್ಟಿದೆ. ಎಷ್ಟು ಟಿಎಂಸಿ ನೀರು ಸಿಗುತ್ತೆ. ಟಿಎಂಸಿ ಅಂದರೆ ಏನು? ಎಲ್ಲದರ ಬಗ್ಗೆ ಒಂದೂವರೆ ತಿಂಗಳೊಳಗೆ 20 ನಿಮಿಷದ ಸಾಕ್ಷ್ಯ ಚಿತ್ರವನ್ನು ಮಾಡಿಕೊಡಿ ಎಂದು ಹೇಳಿರುವುದಾಗಿ ತಿಳಿಸಿದ್ದೇನೆ. ನದಿ ಜೋಡಣೆ ಹಾಗೂ ನದಿ ತಿರುವು ಯೋಜನೆಗಳ ಬಗ್ಗೆ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ ಎಂದರು.

ಇಂದು ಹೆಚ್ಚು ಓದಿದ ಸುದ್ದಿಗಳು:
►►'ಗೋ ಬ್ಯಾಕ್ ಮೋದಿ': ಪ್ರತಿಭಟನಾ ನಿರತರಿಂದ ಮೋದಿಗೆ ಧಿಕ್ಕಾರದ ಸ್ವಾಗತ!:
http://bit.ly/2GXr2SM
►►ಯುವತಿಯೊಂದಿಗೆ ಕಛೇರಿಯಲ್ಲಿ ಪಿಡಿಒ ಸೆಕ್ಸ್: ಸೂಕ್ತ ಕ್ರಮಕ್ಕೆ ಸಮತಾ ಸೈನಿಕ ದಳ ಆಗ್ರಹ: http://bit.ly/2qqICIN
►►ಮಹಿಳೆ ಸಂಶಯಾಸ್ಪದ ಸಾವು. ಗಂಡನ ಮೊಬೈಲ್ ಸ್ವಿಚ್ ಆಫ್: http://bit.ly/2qsoeGi
►►ಭೂತ ಕಟ್ಟುವವರನ್ನು ನಿಂದಿಸಿದ ಕಲ್ಲಡ್ಕ ಭಟ್: ದಲಿತ ದೌರ್ಜನ್ಯ ಕಾಯ್ದೆಯಡಿ ಬಂಧನಕ್ಕೆ ಆಗ್ರಹ: http://bit.ly/2GWQRSY
►►ಉನ್ನಾವ್ ರೇಪ್ ಕೇಸ್: ಬಿಜೆಪಿ ಶಾಸಕನ ಮೇಲೆ ಕೊನೆಗೂ ಎಫ್‌ಐಆರ್. ಸಿಬಿಐಗೆ ಪ್ರಕರಣ: http://bit.ly/2GU1sOR
►►ಕಾರವಾರ: ಲಾರಿ-ಬೈಕ್ ಢಿಕ್ಕಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು: http://bit.ly/2GRpLAR

Related Tags: Actor Prakash Rai, Ananth Kumar Hegde, Bjp, Congress, Vijayapura, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ