ಡಿವಿಲಿಯರ್ಸ್ ಅಬ್ಬರ: ಗೆಲುವಿನ ಖಾತೆ ತೆರೆದ ರಾಯಲ್ ಚಾಲೆಂಜರ್ಸ್

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಪಂದ್ಯದಲ್ಲಿ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಲ್ಕು ವಿಕೆಟ್‌ಗಳ ಜಯ ದಾಖಲಿಸಿದೆ.

ಉಮೇಶ್ ಯಾದವ್ (23ಕ್ಕೆ3) ಬೌಲಿಂಗ್ ಮತ್ತು ಎಬಿ ಡಿವಿಲಿಯರ್ಸ್ (57; 40ಎ, 2ಬೌಂ, 4ಸಿ) ಅವರ ಅಬ್ಬರದ ಬ್ಯಾಟಿಂಗ್‌ನಿಂದ ಆರ್‌ಸಿಬಿ ಗೆಲುವಿನ ನಗು ಬೀರಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ತಂಡ ನಿಗದಿತ ಓವರ್‌ನಲ್ಲಿ 155 ರನ್‌ಗಳನ್ನು ಪೇರಿಸಿತು. 156 ರನ್‍ಗಳ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಆರಂಭಿಕರಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟ್ಸ್‌ಮನ್ ಬ್ರೆಂಡನ್ ಮೆಕ್ಕಲಂ ಶೂನ್ಯಕ್ಕೆ ಔಟಾದರು. ಬಳಿಕ ಜೊತೆಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು.

ಕೊಹ್ಲಿ 21 ರನ್‌ಗಳಿಗೆ ಔಟ್ ಆಗಿ ಪೆವಲಿಯನ್ ಸೇರಿದರು. ಈ ವೇಳೆ ಕಣಕ್ಕಿಳಿದ ಎಬಿ ಡಿವಿಲಿಯರ್ಸ್ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನ ಹಾದಿಗೆ ತಂದರು.

ಈ ನಡುವೆ 45 ರನ್ ಗಳಿಸಿದ್ದ ಡಿಕಾಕ್ ಔಟಾದರು. 17ನೇ ಓವರ್‌ನಲ್ಲಿ ಎಬಿಡಿ ಎರಡು ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ 19 ರನ್ ಕಲೆ ಹಾಕಿದ್ದು ತಂಡ ಗೆಲುವಿನ ಹಾದಿಗೆ ಹತ್ತಿರವಾಯಿತು.

ಆರ್ ಅಶ್ವಿನ್ 2, ಮುಜೀಬ್, ಅಕ್ಷರ್, ಟೈ ತಲಾ 1 ವಿಕೆಟ್ ಪಡೆದರು. ಆರ್ ಸಿಬಿ ಪರ 23ಕ್ಕೆ 3 ವಿಕೆಟ್ ಕಬಳಿಸಿದ ಉಮೇಶ್ ಯಾದವ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಚನ್ನರಾಯಪಟ್ಟಣ ಬಸ್ ಅಪಘಾತ : ಕುಂದಾಪುರದ ಶಾಲಾ ಬಾಲಕ, ಬ್ರಹ್ಮಾವರದ ಯುವಕ ಸಾವು:
http://bit.ly/2ISlLfV
►►ಬ್ಲ್ಯಾಕ್‌ಮೇಲ್ ಪ್ರಕರಣ: ಕುಂದಾಪುರ ಪತ್ರಕರ್ತರ ಸಂಘದಿಂದ ಖಂಡನೆ: http://bit.ly/2Hz1UTR
►►65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: 'ಹೆಬ್ಬೆಟ್ಟು ರಾಮಕ್ಕ' ಕನ್ನಡದ ಅತ್ಯುತ್ತಮ ಚಿತ್ರ: http://bit.ly/2ISekFt
►►ಬೈಂದೂರು ಬಿಜೆಪಿ ಟಿಕೆಟ್ ತಪ್ಪಿದರೆ ಪಕ್ಷೇತರನಾಗಿ ಸ್ಪರ್ಧಿಸಲಾರೆ: ಬಿ.ಎಂ ಸುಕುಮಾರ ಶೆಟ್ಟಿ: http://bit.ly/2IRHKn8
►►ಎ.ಜಿ ಕೊಡ್ಗಿಯವರ ಬಗ್ಗೆ ನನಗೆ ಗೌರವ ಇದೆ: ಹಾಲಾಡಿ ಶ್ರೀನಿವಾಸ ಶೆಟ್ಟಿ: http://bit.ly/2IOy6BQ
►►ಕಾಮನ್‌ವೆಲ್ತ್ ಗೇಮ್ಸ್‌: ಪಿಸ್ತೂಲ್‌ನಲ್ಲಿ ಚಿನ್ನ ಗೆದ್ದ ಭಾರತದ ಅತ್ಯಂತ ಕಿರಿಯ ಸಾಧಕ: http://bit.ly/2GUWIIt

Related Tags: IPL 2018, Royal Challengers Bangalore vs Kings XI Punjab, RCB Win, AB de Villiers, Umesh Yadav, Sports News, Kannada Nerws, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ