ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ: ಕಥುವಾ, ಉನ್ನಾವ್ ಪ್ರಕರಣದ ಬಗ್ಗೆ ಮೌನ ಮುರಿದ ಮೋದಿ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ದೇಶದಾದ್ಯಂತ ಭಾರಿ ಜನಾಕ್ರೋಶಕ್ಕೆ ಕಾರಣವಾದದ ಉನ್ನಾವ್ ಮತ್ತು ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಎರಡೂ ಪ್ರಕರಣಗಳು ಹೀನ ಕೃತ್ಯಗಳು ಮತ್ತು ಈ ಘಟನೆಗಳು ನಾಗರಿಕ ಸಮಾಜದ ಭಾಗವೇ ಅಲ್ಲ. ಸಮಾಜದ ಮತ್ತು ದೇಶದ ದೃಷ್ಟಿಯಿಂದ ಎರಡೂ ಘಟನೆಗಳು ತಲೆ ತಗ್ಗಿಸುವಂಥವುಗಳು ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರಾಷ್ಟ್ರೀಯ ಸ್ಮಾರಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರಡೂ ಪ್ರಕರಣಗಳಲ್ಲಿ ಯಾರೇ ಭಾಗಿಗಳಾಗಲಿ, ಅವರ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಅನ್ಯಾಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ. ಅತ್ಯಾಚಾರದಂತಹ ಕೃತ್ಯಗಳ ವಿರುದ್ಧ ಹೋರಾಟ ನಡೆಸಲು ನಾವು ನಮ್ಮ ಕೌಟುಂಬಿಕ, ಸಾಮಾಜಿಕ ಮೌಲ್ಯಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಗೊಳಿಸಬೇಕಿದೆ ಎಂದು ಕರೆ ನೀಡಿದರು.

ಹೆಣ್ಣು ಮಕ್ಕಳು ವಿಳಂಬವಾಗಿ ಮನೆಗೆ ಬಂದಾಗ ವಿಚಾರಣೆ ನಡೆಸುವ ಹೆತ್ತವರು ಮಗ ತಡವಾಗಿ ಬಂದಾಗಲೂ ತಡವೇಕೆ ಎಂದು ಪ್ರಶ್ನೆ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಹಿಂದೆ ಕೆಂಪು ಕೋಟೆಯಲ್ಲಿ ಮಾತನಾಡಿದ್ದಾಗಲೂ ವಿಳಂಬವಾಗಿ ಏಕೆ ಮನೆಗೆ ಬರುತ್ತೀರಿ ಎಂದು ಹೆತ್ತವರು ಮಗನನ್ನೇ ಪ್ರಶ್ನಿಸಬೇಕು ಎಂದು ಹೇಳಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.

ಎರಡೂ ಹೀನ ಕೃತ್ಯಗಳ ಕುರಿತು ಪ್ರಧಾನಿ ಮೋದಿ ಅವರು ಪ್ರತಿಕ್ರಿಯೆ ನೀಡಿಲ್ಲವೆಂದು ಈ ಹಿಂದೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಡಿವಿಲಿಯರ್ಸ್ ಅಬ್ಬರ: ಗೆಲುವಿನ ಖಾತೆ ತೆರೆದ ರಾಯಲ್ ಚಾಲೆಂಜರ್ಸ್:
http://bit.ly/2IRX1o8
►►ಚನ್ನರಾಯಪಟ್ಟಣ ಬಸ್ ಅಪಘಾತ : ಕುಂದಾಪುರದ ಶಾಲಾ ಬಾಲಕ, ಬ್ರಹ್ಮಾವರದ ಯುವಕ ಸಾವು: http://bit.ly/2ISlLfV
►►ಬ್ಲ್ಯಾಕ್‌ಮೇಲ್ ಪ್ರಕರಣ: ಕುಂದಾಪುರ ಪತ್ರಕರ್ತರ ಸಂಘದಿಂದ ಖಂಡನೆ: http://bit.ly/2Hz1UTR
►►65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: 'ಹೆಬ್ಬೆಟ್ಟು ರಾಮಕ್ಕ' ಕನ್ನಡದ ಅತ್ಯುತ್ತಮ ಚಿತ್ರ: http://bit.ly/2ISekFt
►►ಬೈಂದೂರು ಬಿಜೆಪಿ ಟಿಕೆಟ್ ತಪ್ಪಿದರೆ ಪಕ್ಷೇತರನಾಗಿ ಸ್ಪರ್ಧಿಸಲಾರೆ: ಬಿ.ಎಂ ಸುಕುಮಾರ ಶೆಟ್ಟಿ: http://bit.ly/2IRHKn8
►►ಎ.ಜಿ ಕೊಡ್ಗಿಯವರ ಬಗ್ಗೆ ನನಗೆ ಗೌರವ ಇದೆ: ಹಾಲಾಡಿ ಶ್ರೀನಿವಾಸ ಶೆಟ್ಟಿ: http://bit.ly/2IOy6BQ

Related Tags: PM Modi, Unnao and Kathua Rape Case, Definitely Get Justice, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ