ಕಠುವಾ ಅತ್ಯಾಚಾರ ಪ್ರಕರಣ: ತ್ವರಿತ ನ್ಯಾಯಾಲಯ ರಚಿಸಲು ಮೆಹಬೂಬಾ ಮನವಿ

ಕರಾವಳಿ ಕರ್ನಾಟಕ ವರದಿ

ಶ್ರೀನಗರ:
ಭಾರಿ ಜನಾಕ್ರೋಶಕ್ಕೆ ಕಾರಣವಾದ ಕಠುವಾ ಎಂಟು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ತ್ವರಿತ ನ್ಯಾಯಾಲಯ ರಚಿಸುವಂತೆ ಜಮ್ಮು ಕಾಶ್ಮೀರ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಾಮಲಿಂಗಂ ಸುಧಾಕರ್ ಅವರಿಗೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮನವಿ ಮಾಡಿದ್ದಾರೆ.

ಜಮ್ಮು-ಕಾಶ್ಮೀರ ರಾಜ್ಯದಲ್ಲಿ ರಚಿಸಲಾಗುತ್ತಿರುವ ಮೊದಲ ತ್ವರಿತ ನ್ಯಾಯಾಲಯ ಇದಾಗಿದ್ದು, 90 ದಿನಗಳೊಳಗೆ ಪ್ರಕರಣ ಇತ್ಯರ್ಥಗೊಳಿಸುವಂತೆ ನ್ಯಾಯಾಲಯಕ್ಕೆ ಗಡುವು ನೀಡಲಾಗುತ್ತಿದೆ.

ಜನವರಿ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಕತುವಾ ಪ್ರದೇಶದಲ್ಲ ಎಂಟು ವರ್ಷದ ಮಗುವನ್ನು ಅಪಹರಿಸಿದ ಬಳಿಕ ಆಕೆಗೆ ಮತ್ತು ಬರುವ ಔಷಧ ನೀಡಿ ಹಲವು ದಿನಗಳ ಕಾಲ ದೇವಾಲಯವೊಂದರಲ್ಲಿಟ್ಟು ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 60 ವರ್ಷದ ನಿವೃತ್ತ ಸರ್ಕಾರಿ ನೌಕರ ಮತ್ತು ಓರ್ವ ಪೊಲಿಸ್ ಅಧಿಕಾರಿ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಮೊಬೈಲ್ ಜಾಹೀರಾತಿಗೆ ಮರುಳಾಗಿ ಮೋಸ ಹೋದ ಅಮಾಯಕ: ನಿಮಗೂ ಮೋಸವಾಗಬಹುದು. ಎಚ್ಚರ!:
http://bit.ly/2IVCUpj
►►ವಿರೋಧಿಗಳು ಘೋಷಣೆ ಕೂಗಿದರೆ ನಾನು ಇನ್ನಷ್ಟು ಪ್ರಬಲನಾಗುತ್ತೇನೆ: ಪ್ರಕಾಶ್ ರೈ: http://bit.ly/2ELiyMP
►►ನ್ಯಾಯಾಧೀಶರ ಎದುರೆ ಸರಕಾರಿ ಅಭಿಯೋಜಕರತ್ತ ಶೂ ಎಸೆದ ರೇಪ್ ಆರೋಪಿ: http://bit.ly/2GWTogc
►►ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ: ಕಥುವಾ, ಉನ್ನಾವ್ ಪ್ರಕರಣದ ಬಗ್ಗೆ ಮೌನ ಮುರಿದ ಮೋದಿ: http://bit.ly/2HAQTRZ
►►ಡಿವಿಲಿಯರ್ಸ್ ಅಬ್ಬರ: ಗೆಲುವಿನ ಖಾತೆ ತೆರೆದ ರಾಯಲ್ ಚಾಲೆಂಜರ್ಸ್: http://bit.ly/2IRX1o8
►►ಚನ್ನರಾಯಪಟ್ಟಣ ಬಸ್ ಅಪಘಾತ: ಕುಂದಾಪುರದ ಶಾಲಾ ಬಾಲಕ, ಬ್ರಹ್ಮಾವರದ ಯುವಕ ಸಾವು: http://bit.ly/2ISlLfV

Related Tags: Mehbooba Mufti, Jammu and Kashmir HC, Kathua Rape Case, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ