ಇಂದು ಮಧ್ಯಾಹ್ನ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ 223 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಭಾನುವಾರ ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳಲಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೇ ಮೂರು ಗಂಟೆಗೂ ಅಧಿಕ ಕಾಲ ರಾಜ್ಯ ಮುಖಂಡರೊಂದಿಗೆ ಚರ್ಚಿಸಿ, 199 ಕ್ಷೇತ್ರಗಳ ಅಭ್ಯರ್ಥಿಗಳ ಟಿಕೆಟ್ ಸಿದ್ದಪಡಿಸಿದ್ದರು. ಆದರೆ, ಇನ್ನೂ 24 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಮುಂದುವರಿದಿದ್ದರಿಂದ ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಪಕ್ಷದ ಹಾಲಿ ಶಾಸಕರಲ್ಲಿ ಏಳು ಸಚಿವರೂ ಸೇರಿ 27 ಜನರಿಗೆ ಟಿಕೆಟ್‌ ನೀಡದಿರಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಿರ್ಧರಿಸಿದ್ದರು. ಆದರೆ, ಅಷ್ಟೊಂದು ಜನ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದರೆ, ಬಂಡಾಯ ಹಾಗೂ ಪಕ್ಷಾಂತರ ಪರ್ವಕ್ಕೆ ನಾಂದಿಯಾಗುತ್ತದೆ ಎಂದು ರಾಜ್ಯ ನಾಯಕರು ರಾಹುಲ್‌ ಗಾಂಧಿ ಮನವೊಲಿಸಿ ವಯೋಮಿತಿ ಹಾಗೂ ಆರೋಪ ಎದುರಿಸುತ್ತಿರುವ ಏಳು ಜನ ಹಾಲಿ ಶಾಸಕರಿಗೆ ಟಿಕೆಟ್‌ ನೀಡದಿರಲು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೇ ಟಿಕೆಟ್‌ ಕೈ ತಪ್ಪುವ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಬಂಡಾಯ ಏಳದಂತೆ ನೋಡಿಕೊಳ್ಳಲು ಅವರೊಂದಿಗೆ ಮಾತುಕತೆ ನಡೆಸಿ ಅಧಿಕೃತ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಐವರು ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಪ್ರತಿಭಾ ಕುಳಾಯಿ:
http://bit.ly/2JKCUJG
►►ಕಠುವಾ ಅತ್ಯಾಚಾರ ಪ್ರಕರಣ: ತ್ವರಿತ ನ್ಯಾಯಾಲಯ ರಚಿಸಲು ಮೆಹಬೂಬಾ ಮನವಿ: http://bit.ly/2vdKfyj
►►ಮೊಬೈಲ್ ಜಾಹೀರಾತಿಗೆ ಮರುಳಾಗಿ ಮೋಸ ಹೋದ ಅಮಾಯಕ: ನಿಮಗೂ ಮೋಸವಾಗಬಹುದು. ಎಚ್ಚರ!: http://bit.ly/2IVCUpj
►►ವಿರೋಧಿಗಳು ಘೋಷಣೆ ಕೂಗಿದರೆ ನಾನು ಇನ್ನಷ್ಟು ಪ್ರಬಲನಾಗುತ್ತೇನೆ: ಪ್ರಕಾಶ್ ರೈ: http://bit.ly/2ELiyMP

Related Tags: Karnataka Elections, List Of Candidates, Rahul Gandhi, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ