ಕಠುವಾ ಅತ್ಯಾಚಾರ ಭಯಾನಕ ಕೃತ್ಯ: ವಿಶ್ವಸಂಸ್ಥೆ ಕಳವಳ
Apr 14 2018 10:48PM
ಕರಾವಳಿ ಕರ್ನಾಟಟಕ ವರದಿ

ವಿಶ್ವಸಂಸ್ಥೆ: ಕಠುವಾ ಜಿಲ್ಲೆಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
ಇದೊಂದು 'ಭಯಾನಕ' ಕೃತ್ಯ. ಬಾಲಕಿ ಮೇಲೆ ನಡೆದ ಕೃತ್ಯದ ಭಯಾನಕತೆಯನ್ನು ಮಾಧ್ಯಮಗಳಿಂದ ನಾವು ತಿಳಿದಿದ್ದೇವೆ. ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿ ನ್ಯಾಯ ಸಿಗಲಿದೆ ಎಂಬ ಸಂಪೂರ್ಣ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್ ತಿಳಿಸಿದ್ದಾರೆ ಎಂದು ಮಹಾಪ್ರಧಾನ ಕಾರ್ಯದರ್ಶಿ ಕಚೇರಿಯ ವಕ್ತಾರ ಡುಜಾರಿಕ್ ಹೇಳಿದ್ದಾರೆ.
ದೈನಂದಿನ ಪತ್ರಿಕಾಗೋಷ್ಠಿಯ ವೇಳೆ ಜಮ್ಮು- ಕಾಶ್ಮೀರದ ಬಾಲಕಿಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಮಹಿಳೆಯರು ಮತ್ತು ಬಾಲಕಿಯರನ್ನು ಹಿಂಸಿಸದೇ ಇರುವ ದೇಶಗಳು ಈ ಗ್ರಹದ ಮೇಲೇ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಎಲ್ಲ ದಿಕ್ಕುಗಳಲ್ಲೂ ಇಂತಹ ನಡವಳಿಕೆಯನ್ನು ನಾವು ಕಾಣುತ್ತೇವೆ ಎಂದು ಡುಜಾರಿಕ್ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ ಮತ್ತು ಮಹಿಳಾ ಸಬಲೀಕರಣದ ಮೂಲಕ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನವನ್ನು ವಿಶ್ವಸಂಸ್ಥೆ ಮಾಡುತ್ತಿದೆ. ಹಲವಾರು ಕಾರ್ಯಕ್ರಮಗಳ ಮೂಲಕ, ವಿಶ್ವಸಂಸ್ಥೆ–ಮಹಿಳೆ, ಯುಎನ್ಎಫ್ಪಿಎ (ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ), ಯುನಿಸೆಫ್ (ವಿಶ್ವಸಂಸ್ಥೆಯ ಮಕ್ಕಳ ಕಲ್ಯಾಣ ನಿಧಿ) ಮತ್ತು ಇತರರ ಮೂಲಕ ಸರ್ಕಾರಗಳೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕೆಂಬ ಸಂದೇಶಗಳನ್ನು ಸಮಾಜಕ್ಕೆ ತಲುಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇಂದು ಹೆಚ್ಚು ಓದಿದ ಸುದ್ದಿಗಳು:
►►ಇಂದು ಮಧ್ಯಾಹ್ನ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: http://bit.ly/2HEHIQs
►►ಐವರು ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಪ್ರತಿಭಾ ಕುಳಾಯಿ: http://bit.ly/2JKCUJG
►►ಕಠುವಾ ಅತ್ಯಾಚಾರ ಪ್ರಕರಣ: ತ್ವರಿತ ನ್ಯಾಯಾಲಯ ರಚಿಸಲು ಮೆಹಬೂಬಾ ಮನವಿ: http://bit.ly/2vdKfyj
►►ಮೊಬೈಲ್ ಜಾಹೀರಾತಿಗೆ ಮರುಳಾಗಿ ಮೋಸ ಹೋದ ಅಮಾಯಕ: ನಿಮಗೂ ಮೋಸವಾಗಬಹುದು. ಎಚ್ಚರ!: http://bit.ly/2IVCUpj
►►ವಿರೋಧಿಗಳು ಘೋಷಣೆ ಕೂಗಿದರೆ ನಾನು ಇನ್ನಷ್ಟು ಪ್ರಬಲನಾಗುತ್ತೇನೆ: ಪ್ರಕಾಶ್ ರೈ: http://bit.ly/2ELiyMP
Related Tags: Kathua Gang Rape, Murder, UN Chief Antonio Guterres, Horrific, Kannada News, Karavalikarnataka News