ಮರಕ್ಕೆ ಢಿಕ್ಕಿಯಾದ ಖಾಸಗಿ ಬಸ್: ಇಬ್ಬರು ಪ್ರಯಾಣಿಕರ ಸಾವು. ಹಲವರಿಗೆ ಗಾಯ

ಕರಾವಳಿ ಕರ್ನಾಟಕ ವರದಿ

ಹಾವೇರಿ:
ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್‌ಎಲ್ ಖಾಸಗಿ ಬಸ್ ಇಲ್ಲಿನ ಹಾನಗಲ್ ಕ್ರಾಸ್ ಬಳಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಡಾ.ಜಯಲಕ್ಷ್ಮೀ (45) ಹಾಗೂ ಗೀತಾ (27) ಮೃತ ದುರ್ದೈವಿಗಳು.

ಸೋಮವಾರ ಮುಂಜಾನೆ ಬೆಂಗಳೂರಿನಿಂದ ಸಾಗರದ ಮಾರ್ಗವಾಗಿ ಸಾಗುತ್ತಿದ್ದ ಬಸ್ಸು ಹಾನಗಲ್ ಸಮೀಪ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು.

ಢಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು ಎಂದು ತಿಳಿದುಬಂದಿದ್ದು ಸುಮಾರು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೂಡಲೇ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು:
►►ವಿಧಾನಸಭೆ ಚುನಾವಣೆ: 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ:
http://bit.ly/2EMbkIx
►►ನಕ್ಸಲ್ ಪ್ರತಿಭಟನೆ. ಬಿಜೆಪಿ ಆರೋಪದ ವಿರುದ್ದ ಕಾನೂನು ಹೋರಾಟ: ನಟ ಚೇತನ್: http://bit.ly/2HnUd5e
►►ಸಮಾಜದಿಂದ ಎಲ್ಲವನ್ನೂ ಪಡೆದ ಅಷ್ಟಮಠಗಳಿಂದ ಸಮಾಜಕ್ಕೆ ಏನು ಸಿಕ್ಕಿದೆ? ಪುರುಷೋತ್ತಮ ಬಿಳಿಮಲೆ ಪ್ರಶ್ನೆ: http://bit.ly/2JN8VBc
►►ಮಗಳಿಗೆ 'ಆಸಿಫಾ' ಎಂದು ಹೆಸರಿಟ್ಟ ಪತ್ರಕರ್ತ: ದೇಶಾದ್ಯಂತ ಭಾರಿ ಮೆಚ್ಚುಗೆ: http://bit.ly/2GYwdC9

Related Tags: VRL Bus Accident, Two Died, Dr. Jayalaxmi, Geetha Death, Hanagal Police, Haveri, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ