ಐಪಿಎಲ್-2018: ರಾಯಲ್ಸ್ ವಿರುದ್ದ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ

ಕರಾವಳಿ ಕರ್ನಾಟಕ ವರದಿ

ಜೈಪುರ:
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ರಾಜಸ್ಥಾನ ರಾಯಲ್ಸ್ ತಂಡ ನೀಡಿದ 161 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೋಲ್ಕತಾ ತಂಡ ಕೇವಲ 18.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಸಮಯೋಚಿತ ಇನ್ನಿಂಗ್ಸ್ ಕಟ್ಟಿದ ರಾಬಿನ್ ಉತ್ತಪ್ಪ (48) ಹಾಗೂ ದಿನೇಶ್ ಕಾರ್ತಿಕ್ (42*) ತಂಡದ ಗೆಲುವನ್ನು ಸುಲಭಗೊಳಿಸಿದರು. ಇದರೊಂದಿಗೆ ಐಪಿಎಲ್ 2018ನೇ ಸಾಲಿನಲ್ಲಿ ರಾಜಸ್ಥಾನ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ರಾಜಸ್ಥಾನ ತಂಡ ನಿಗದಿತ 20 ಓವರ್‍‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು.

ನಾಯಕ ಅಜಿಂಕ್ಯಾ ರಹಾನೆ ಮತ್ತು ಆರ್ಕಿ ಶಾರ್ಟ್ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ವಿಫಲತೆಯಿಂದಾಗಿ ರಾಜಸ್ಥಾನ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲವಾಯಿತು.

ಇಂದು ಓದಿದ ಹೆಚ್ಚು ಸುದ್ದಿಗಳು:
►►ಮುನಿಸು ತರವೆ? ಜನಾರ್ದನ ಪೂಜಾರಿ ಭೇಟಿ ಮಾಡಿದ ರಮಾನಾಥ ರೈ:
http://bit.ly/2J6qFWV
►►ಕಠುವಾ ಪ್ರಕರಣ ನಾಚಿಕೆಗೇಡು: ರಾಷ್ಟ್ರಪತಿ ಕೋವಿಂದ್: http://bit.ly/2J6qFWV
►►ಬೆಳ್ತಂಗಡಿ: ಅನುಭವಿ ಬಂಗೇರ v/s ಚತುರ ಸಂಘಟಕ ಪೂಂಜ: http://bit.ly/2HB5Zci
►►ಇಲ್ಯಾಸ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ: http://bit.ly/2Ha5pmI

Related Tags: IPL 2018, RR V/s KKR, KKR Wins By 7 Wickets, Kolkata Knight Riders and Rajasthan Royals, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ