ಮುನಿಯಾಲುಗೆ ತಪ್ಪಿದ ಟಿಕೆಟ್: ಬೆಂಬಲಿಗರಿಂದ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ

ಕರಾವಳಿ ಕರ್ನಾಟಕ ವರದಿ

ಉಡುಪಿ:
ಕಾರ್ಕಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗಬೇಕು ಎಂದು ಹಠಕ್ಕೆ ಬಿದ್ದಿರುವ ಬೆಂಬಲಿಗರು, ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ನಮ್ಮ ಬೆಂಬಲ ಉದಯಕುಮಾರ್ ಶೆಟ್ಟಿಯವರಿಗೆ ಎಂದು ಸಹಿ ಸಂಗ್ರಹ ಮಾಡಿದರು.

ಉದಯ ಕುಮಾರ್ ಶೆಟ್ಟಿಯವರಿಗೆ ಬಿ ಫಾರಂ ನೀಡುವಂತೆ ಒತ್ತಾಯಿಸಿ ಜಿಲ್ಲಾಧ್ಯಕ್ಷ ಜನಾರ್ಧನ ತೋನ್ಸೆಯವರಿಗೆ ಮನವಿ ಸಲ್ಲಿಸಿದರು.

ಒಂದು ವೇಳೆ ಪಕ್ಷ ಉದಯ ಕುಮಾರ್ ಶೆಟ್ಟಿಯವರಿಗೆ ಬಿ ಫಾರಂ ನೀಡದೇ ಇದ್ದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉದಯಕುಮಾರ್ ಅವರನ್ನು ನಿಲ್ಲಿಸಲಾಗುವುದು ಎಂಬ ಎಚ್ಚರಿಕೆಯನ್ನು ಬೆಂಬಲಿಗರು ನೀಡಿದ್ದಾರೆ.

ಕಾರ್ಯಕರ್ತರ ಮುತ್ತಿಗೆ ಘಟನೆಗೆ ಸಂಬಂಧಿಸಿದಂತೆ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ಧನ ತೋನ್ಸೆ ಮಾತನಾಡಿ, ಕಾರ್ಯಕರ್ತರು ಉದಯಕುಮಾರ್ ಅವರಿಗೆ ಬಿಫಾರಂ ಕೊಡಿ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಈ ಮನವಿಯನ್ನು ಕೆಪಿಸಿಸಿಗೆ ಕಳುಹಿಸಲಾಗುವುದು ಎಂದಿದ್ದಾರೆ.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಬಹುತೇಕ ಖಚಿತವಾಗಿತ್ತು. ಆದರೆ ಈ ನಡುವೆ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಯಾಗಿ‌ ಮಾಜಿ ಶಾಸಕ ಗೋಪಾಲ ಭಂಡಾರಿ ಅವರನ್ನು ಪಕ್ಷ ಆಯ್ಕೆ ಮಾಡಿತ್ತು.

ಇದೇ ಕಾರಣಕ್ಕಾಗಿ ರಾಜ್ಯ ನಾಯಕರ ವಿರುದ್ದ ಅಸಮಾಧಾನ ಹೊರಹಾಕಿದ ಮುನಿಯಾಲು ಬೆಂಬಲಿಗರು ಇತ್ತೀಚೆಗಷ್ಟೇ ಎರಡು ದಿನಗಳ ಕಾಲ ಕಾರ್ಕಳ ನಗರ ಹಾಗೂ ಹೆಬ್ರಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದ್ದರು.

ಮುನಿಯಾಲು ಅವರಿಗೆ ಟಿಕೆಟ್ ತಪ್ಪಿಸಿದ್ದು ವೀರಪ್ಪ ಮೊಯ್ಲಿ ಎಂದು ಆರೋಪಿಸಿ ಮೊಯ್ಲಿ ಹಟಾವೋ, ಕಾಂಗ್ರೆಸ್ ಬಚಾವೋ ಎನ್ನುವ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶಗಳನ್ನು ಹೊರಗೆಡವಿದ್ದರು.

ಆದರೆ ಇದಕ್ಕೆ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೋಪಾಲ ಭಂಡಾರಿಯವರ ಮನೆಗೂ ತೆರಳಿದ ಬೆಂಬಲಿಗರು ಚುನಾವಣೆಯಿಂದ ಹಿಂದೆ ಸರಿಯಿರಿ ಎಂಬ ಒತ್ತಡವನ್ನೂ ಹೇರಿದ್ದರು. ಆದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಡಿ. ಕೆ. ಶಿವಕುಮಾರ್ ಆಸ್ತಿ ಎರಡು ಪಟ್ಟು ಅಧಿಕ: ಜೆಡಿಎಸ್‌ನಲ್ಲೂ ಶತಕೋಟಿ ಒಡೆಯರು:
http://bit.ly/2HMYJI4
►►ಅಜ್ಜ-ಅಜ್ಜಿಗೆ ಹಲ್ಲೆಗೈದು ಚಿನ್ನಾಭರಣ ದರೋಡೆ: ಅಪರಾಧಿಗೆ ಎ.24ರಂದು ಶಿಕ್ಷೆ ಪ್ರಕಟ: http://bit.ly/2qOGzhg
►►ಹನುಮಾನ್ ಚಿತ್ರವಿರುವ ಕ್ಯಾಬ್ ಚಾಲಕರು ಅತ್ಯಾಚಾರಿಗಳು: 'ಕಿಸ್ ಆಫ್ ಲವ್' ರಶ್ಮಿ ಆಕ್ರೋಶ: http://bit.ly/2HEQ4tw
►►ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿಗೆ ಅದ್ದೂರಿ ಸ್ವಾಗತ: http://bit.ly/2JWhHwN
►►ರಮಾನಾಥ ರೈ, ಅಭಯಚಂದ್ರ, ಮುನೀರ್ ಕಾಟಿಪಳ್ಳ ನಾಮಪತ್ರ: http://bit.ly/2Hd2VzK
►►ಶಿಕಾರಿಪುರದ ಹೆಣ್ಣುಬಾಕನ ಸಿ.ಡಿ ಹಾಲಪ್ಪನ ಬಳಿ ಇರಬೇಕು. ಅದಕ್ಕೆ ಟಿಕೆಟ್ ಕೊಟ್ಟಿದ್ದಾರೆ: ಬೇಳೂರು ಆರೋಪ: http://bit.ly/2HJGrr5

Related Tags: Karkala, Muniyal Uday Shetty, Contest As Independent, Warn Supporters, Cong Ticket, JanardhanTonse, Congress Office Udupi, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕನ್ನಡ ಸುದ್ದಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ, ಇತ್ತೀಚಿನ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ