ಮತ ಎಣಿಕೆ: ಉಡುಪಿ, ದ. ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ. ವಿಜಯೋತ್ಸವ ನಡೆಸುವಂತಿಲ್ಲ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.

ಮಂಗಳೂರು ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಾನೂನು ಉಲ್ಲಂಘಿಸಿದರೆ ಅಥವಾ ವಿಜಯೋತ್ಸವ ಮಾಡಿದರೆ ಮುಲಾಜಿಲ್ಲದೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇಂದು ಮಧ್ಯರಾತ್ರಿಯಿಂದ 16ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಾಗಿದ್ದು, ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ಮದ್ಯಮಾರಾಟವನ್ನು ಕೂಡ ನಿಷೇಧವಾಗಲಿದೆ ಅಂದ್ರು.

ಉಡುಪಿ ವರದಿ
ಮೇ.15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೇ 15ರ ಬೆಳಿಗ್ಗೆ ಗಂಟೆ 6 ರಿಂದ 17ರ ಬೆಳಿಗ್ಗೆ ಗಂಟೆ 6 ರವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ಯಾವುದೇ ಸಭೆ ಸಮಾರಂಭ, ವಿಜಯೋತ್ಸವ, ಮೆರವಣಿಗೆ ಮಾಡುವುದು, ಪರ ಹಾಗೂ ವಿರೋಧ ಘೋಷಣೆ ಕೂಗುವುದು, ಗುಂಪು ಸೇರುವುದು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.

ಗೆಲವು ಸಾಧಿಸಿದ ಹಾಗೂ ಸೋತ ಪಕ್ಷಗಳ ನಡುವೆ ಗೊಂದಲ ಉಂಟಾಗಿ ಗಲಭೆ ನಡೆಯುವ ಸಾಧ್ಯತೆಗಳಬಗ್ಗೆ ಉಡುಪಿ ಜಿಲ್ಲಾ ಎಸ್ಪಿ ನೀಡಿದ ವರದಿಯಂತೆ ಈ ಆದೇಶ ಮಾಡಲಾಗಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು
http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN
►►ಬೇಕಾದರೆ ಬರೆದುಕೊಡ್ತೀನಿ. ನಮಗೆ 125 ರಿಂದ 130 ಸೀಟು ಸಿಗಲಿದೆ: ಯಡಿಯೂರಪ್ಪ http://bit.ly/2rEC8WC
►►ಚುನಾವಣೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆಯತ್ತ ಕರ್ನಾಟಕ? http://bit.ly/2IxBdlc
►►ಕಾಂಗ್ರೆಸ್ಗೆ 110ಕ್ಕೂ ಹೆಚ್ಚು ಸೀಟು ಬರಲಿದೆ. ಹೇಗೆ ಮತ್ತು ಏಕೆ? http://bit.ly/2jQlBLE
►►ಚಲಿಸುತ್ತಿದ್ದ  ಬೈಕ್ ಮೇಲೆ ಬಿದ್ದ ಮರ, ಯುವಕ ಸಾವು http://bit.ly/2jQsTz0
►► ಚರ್ಚ್ ದಾಳಿ ಕುರಿತ ಅಸಂಬದ್ದ ವಿಡೀಯೋ. ರೊಬರ್ಟ್ ರೊಝಾರಿಯೊ ವಿರುದ್ದ ಪೊಲೀಸ್ ದೂರು

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ