ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರ ರಚಿಸಲು ಸುಲಭದಲ್ಲಿ ಬಿಡಲಾರೆ: ಮೋದಿ ಸುಳಿವು

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಸರ್ಕಾರ ರಚಿಸುವ ಯಾವುದೇ ಅವಕಾಶವನ್ನು ಬಿಜೆಪಿ ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ ಎಂದು ಸುಳಿವು ನೀಡಿದ್ದಾರೆ.

104 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಪಕ್ಷದ ಸಾಧನೆಗೆ ತೃಪ್ತಿ ವ್ಯಕ್ತಪಡಿಸಿದ ಮೋದಿ, ‘ಅಸಾಮಾನ್ಯ ಮತ್ತು ಅಭೂತಪೂರ್ವ’ ಗೆಲುವು ಎಂದು ಬಣ್ಣಿಸಿದ್ದಾರೆ.

ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಅಭಿವೃದ್ಧಿಯ ಪಯಣಕ್ಕೆ ಯಾರೂ ಅಡ್ಡಿಯಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ರಚನೆಯ ಅವಕಾಶವನ್ನು ಸುಲಭವಾಗಿ ಕೈಚೆಲ್ಲುತ್ತದೆ ಎಂದು ವಿರೋಧಿಗಳು ಭಾವಿಸಿದ್ದಾರೆ. ಆದರೆ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಯು ಉತ್ತರ ಭಾರತದ ಹಿಂದಿ ಭಾಷಿಕರ ಪಕ್ಷ ಎಂಬ ಆರೋಪವನ್ನು ಕರ್ನಾಟಕದ ಫಲಿತಾಂಶ ಸುಳ್ಳು ಮಾಡಿ ತೋರಿಸಿದೆ ಎಂದು ಮೋದಿ ಸಂತಸವ್ಯಕ್ತಪಡಿಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಮಂಗಳೂರು: ವಿಜಯೋತ್ಸವದ ವೇಳೆ ಪರಸ್ಪರ ಕಲ್ಲು ತೂರಾಟ. ಓರ್ವ ಆಸ್ಪತ್ರೆಗೆ ದಾಖಲು
http://bit.ly/2jXKyES
►►ಕರ್ನಾಟಕ ಅತಂತ್ರ: ಮುಂದಿನ 24 ಗಂಟೆಗಳಲ್ಲಿ ಏನೆಲ್ಲ ನಡೆಯಬಹುದು? ಇಲ್ಲಿದೆ ಒಂದು ನೋಟ http://bit.ly/2GmJpzD
►►ಅತಂತ್ರ ವಿಧಾನಸಭೆ. ಸರ್ಕಾರ ರಚನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟ ಹಕ್ಕು ಮಂಡನೆ http://bit.ly/2GmELBI
►►ಜೆಡಿಎಸ್‌ಗೆ ಬೇಷರತ್ ಬೆಂಬಲ ಸಾರಿದ ಕಾಂಗ್ರೆಸ್ ಜೆಡಿಎಸ್ ಗ್ರೀನ್ ಸಿಗ್ನಲ್‌ಗೆ ಕ್ಷಣಗಣನೆ  http://bit.ly/2rKBoiH
►►ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ ಆಯ್ಕೆ. ಮಂಗಳೂರಿನಿಂದ ಯು. ಟಿ. ಖಾದರ್ ಗೆಲುವು
http://bit.ly/2Iok2iC
►►ಗೆಲುವಿನ ಖಾತೆ ತೆರೆದ ಬಿಜೆಪಿ. ಮೂಡಬಿದಿರಿಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು
http://bit.ly/2jXMy0c
►►ಇಂದು ಮತದಾರನ ತೀರ್ಪು ಬಹಿರಂಗ: http://bit.ly/2IGi54w
►►ಚನ್ನಪಟ್ಟಣದಲ್ಲಿ  ಸಿ.ಪಿ.ಯೋಗೇಶ್ವರ್‌ಗೆ ಸೋಲಿನ ಭೀತಿ http://bit.ly/2IguHQD
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು. ಮತ್ತೆ ಬಹುಮತದ ಕಾಂಗ್ರೆಸ್ ಸರ್ಕಾರ? http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ