ವಿಶ್ವಾಸಮತ ಯಾಚಿಸದೆ ರಾಜೀನಾಮೆ ನೀಡಿದ ಯಡಿಯೂರಪ್ಪ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಬಹುಮತ ಇಲ್ಲದೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್‌.ಯಡಿಯೂರಪ್ಪ ಶನಿವಾರ ವಿಶ್ವಾಸಮತ ಯಾಚನೆ ಮಾಡದೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

104 ಸ್ಥಾನ ಗೆದ್ದ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನ ನೀಡಿದ್ದರು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು.

ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಗಡುವು ನೀಡಿದ್ದರು. ಆದರೆ, ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌; ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಬಿಜೆಪಿಗೆ ಸೂಚನೆ ನೀಡಿತ್ತು.

ವಿಧಾನಸಭೆಯ 222 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 78 ಸ್ಥಾನ ಗೆದ್ದ ಕಾಂಗ್ರೆಸ್‌ ಮತ್ತು 38 ಸ್ಥಾನ ಗೆದ್ದ ಜೆಡಿಎಸ್‌, ಇಬ್ಬರು ಪಕ್ಷೇತರನ್ನೂ ಸೇರಿಸಿಕೊಂಡು ಮೈತ್ರಿ ಸರ್ಕಾರ ರಚಿಸುವ ಪ್ರಸ್ತಾವವನ್ನು ರಾಜ್ಯಪಾಲರ ಮುಂದಿಡಲಾಗಿತ್ತು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ