ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರತಾಪಚಂದ್ರ ಶೆಟ್ಟರಿಗೆ ಒಲಿಯುವುದೆ ಸಚಿವ ಸ್ಥಾನ?

ಕರಾವಳಿ ಕರ್ನಾಟಕ ವರದಿ


ಉಡುಪಿ:
ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಕನಿಷ್ಟ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇದ್ದ ಉಡುಪಿ ಜಿಲ್ಲೆಗೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದಕ್ಕುವುದೆ? ಇಂತಹ ಲೆಕ್ಕಾಚಾರದಲ್ಲಿ ಈ ಪಕ್ಷಗಳಿಂದ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ವಿಧಾನಸಭಾ ಸದಸ್ಯನಿಲ್ಲದಿದ್ದರೂ ವಿಧಾನಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟರಿಗೆ ಸಚಿವ ಸ್ಥಾನ ಸಿಗುವುದೆ?

ಸೋಷಿಯಲ್ ಮೀಡಿಯಾದಲ್ಲಿ ಚಾಲ್ತಿಯಲ್ಲಿರುವ ಸಂಭಾವ್ಯ ಸಚಿವ ಸಂಪುಟದ ಪಟ್ಟಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಕುಂದಾಪುರದ ಪ್ರತಾಪಚಂದ್ರ ಶೆಟ್ಟಿಯವರಿಗೆ ಅರಣ್ಯ ಸಚಿವ ಖಾತೆ ದೊರೆಯಲಿದೆ ಎನ್ನಲಾಗುತ್ತಿದೆ.  ಹಾಗಾದಲ್ಲಿ ಮೊದಲ ಬಾರಿಗೆ ಪ್ರತಾಪ ಚಂದ್ರ ಶೆಟ್ಟಿ ಸಚಿವರಾಗಲಿದ್ದಾರೆ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯೂ ಅವರ ಹೆಗಲಿಗೇರಲಿದೆ.

ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಒಂಬತ್ತು ಮಂದಿ ಶಾಸಕರಲ್ಲಿ ಕೆ. ಜಯಪ್ರಕಾಶ್‌ ಹೆಗ್ಡೆ -ಜನತಾದಳ, ಡಾ| ವಿ.ಎಸ್‌. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯವರಾದರೆ ಉಳಿದವರೆಲ್ಲರೂ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು.

ಉಡುಪಿ ಜಿಲ್ಲೆ ಜೆಡಿಎಸ್‌ ಪಾಲಿಗಾದರೆ ಹೊರಗಿನ ಸಚಿವರು ಇಲ್ಲಿಗೆ ಉಸ್ತುವಾರಿಯಾಗಿ ಬರಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾಗಿ ಸಚಿವರಾಗಬಲ್ಲ ವರ್ಚಸ್ಸು ಹೊಂದಿದ ಸ್ಥಳೀಯ ಜೆಡಿಎಸ್‌ ನಾಯಕರು ಇಲ್ಲವಾದ ಕಾರಣ ಹೊರಗಿನ ಜಿಲ್ಲೆಯವರು ಉಸ್ತುವಾರಿಯಾಗುವುದು ಅನಿವಾರ್ಯ.

ಸುದೀರ್ಘ‌ ಕಾಲ ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿದ್ದರೂ ಪ್ರತಾಪಚಂದ್ರ ಶೆಟ್ಟಿಯವರಿಗೆ ಸಚಿವರಾಗುವ ಯೋಗ ಬಂದಿರಲಿಲ್ಲ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ