ರೈತರ ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‌: ಯಡಿಯೂರಪ್ಪ ಘೋಷಣೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
24 ಗಂಟೆಗಳೊಳಗೆ ರೈತರ ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ಕೊಡುತ್ತೇವೆ ಎಂದು ಹೇಳಿದ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಭಾಷಣದ ಬಳಿಕ ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ, ಪಕ್ಷದ ಸದಸ್ಯರ ಜತೆಗೂಡಿ ಸದನದಿಂದ ಹೊರನಡೆದರು.

ಶುಕ್ರವಾರ ಸಭಾಧ್ಯಕ್ಷರ ಆಯ್ಕೆ ಬಳಿಕ, ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಭಾಷಣದ ನಂತರ ಮಾತನಾಡಿದ ಯಡಿಯೂರಪ್ಪ ಅವರು, ಹಳೆಯ ಘಟನೆಗಳನ್ನು ಮೆಲುಕು ಹಾಕಿದರು. ರೈತರ ಸಾಲ ಮನ್ನಾ ವಿಚಾರ ಕುರಿತು ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ  ಸಾಲ, ಖಾಸಗಿಯವರ ಬಳಿ ಮಾಡಿರುವ ಸಾಲವನ್ನೂ ಮನ್ನಾ ಮಾಡುವುದಾಗಿ ಹೇಳಿದ್ದೀರಿ. ಅದರಂತೆ ಮನ್ನಾ ಮಾಡಿ. ಮಾತು ತಪ್ಪಿದರೆ, ಸೋಮವಾರ ಕರ್ನಾಟಕ ಬಂದ್‌ ಮಾಡುತ್ತೇವೆ ಎಂದು ಘೋಷಿಸಿದರು.

ವಿವಿಧ ಪಿಂಚಣಿ, ಸೇರಿದಂತೆ ಹಲವು ಭರವಸೆ ನೀಡಿದ್ದೀರಿ. ಕುಮಾರಸ್ವಾಮಿ ಅವರೇ ಈಗ ಬಹುಮತ ಪಡೆದ ಬಳಿಕ ಸಾಲಮನ್ನಾ ಮಾಡಿ ತೋರಿಸಿ. ನಿಮ್ಮ ಪ್ರಣಾಳಿಕೆಯಂತೆ ಕನಿಷ್ಠ ಪಕ್ಷ ಬರಗಾಲಕ್ಕೆ ಸಿಕ್ಕಿ ನಲುಗಿರುವ ಜನರಿಗೆ ನೆರವಾಗಿ ನಿಲ್ಲಿ ಎಂದು ಜೆಡಿಎಸ್‌ನ ಪ್ರಣಾಳಿಕೆ ಪ್ರತಿಯನ್ನು ಯಡಿಯೂರಪ್ಪ ಸದನದಲ್ಲಿ ತೋರಿಸಿದರು. ಮಾತು ತಪ್ಪಿ ನಡೆದ ಬಂದ್‌ ನಡೆಸುತ್ತೇವೆ ಎಂದು ಪಕ್ಷದ ಸದಸ್ಯರ ಜತೆಗೂಡಿ ಸದನದಿಂದ ಹೊರ ನಡೆದರು.

ಇಂದು ಹೆಚ್ಚು ಓದಿದ ಸುದ್ದಿಗಳು
►►ದಕ್ಷಿಣ ಕನ್ನಡ: ನಿಫಾ ವೈರಸ್‌ ಭೀತಿ–ಆತಂಕ ಬೇಡ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಹೇಳಿಕೆ
http://bit.ly/2IZSV19
►►ಇಂದು ಮೈತ್ರಿ ಸರ್ಕಾರ ವಿಶ್ವಾಸಮತ. ಸ್ಪೀಕರ್ ಆಯ್ಕೆ http://bit.ly/2GO2DOW
►►ಮಕ್ಕಳ ಕಳ್ಳನೆಂದು ಭಾವಿಸಿ ಯುವಕನ ಕೊಂದ ಜನ! ಚಾಮರಾಜಪೇಟೆಯಲ್ಲಿ ಪೈಶಾಚಿಕ ಕೃತ್ಯ
 
http://bit.ly/2IMIytV
►►ಡಿ.ಕೆ.ಶಿವಕುಮಾರ್'ಗೆ ಮಂತ್ರಿಗಿರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ? http://bit.ly/2x7GVpD
►►ರೈತರ ಸಾಲ ಮನ್ನಾ ಮಾಡದಿದ್ದರೆ ಹೋರಾಟ: ಯಡಿಯೂರಪ್ಪ ಎಚ್ಚರಿಕೆ http://bit.ly/2IGZWo3
►►ಪೋಟೋಗ್ರಾಫರ್ ದೀಪಕ್ ಅನುಮಾನಾಸ್ಪದ ಸಾವು http://bit.ly/2J26LzT
►►37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಆಗುತ್ತಾ?►►ದೇವೇಗೌಡರ ಸಲಹೆ ಏನು? http://bit.ly/2rZ7IiW
►►ನಾನು ಯಾರಿಗೂ ಭಾರವಾಗಿ ಬದುಕಬಾರದು http://bit.ly/2J0grLe
►►ಕಾಂಗ್ರೆಸ್ 22, ಜೆಡಿಎಸ್ಗೆ 12 ಮಂತ್ರಿ ಸ್ಥಾನ http://bit.ly/2IC8YTn
►►ಹಳೆಯದ್ದನ್ನು ಮರೆತು ಮುಂದೆ ಹೆಜ್ಜೆ ಹಾಕೋಣ ಕುಮಾರಸ್ವಾಮಿಗೆ ಸೋನಿಯಾ ಹಿತನುಡಿ http://bit.ly/2s06aFg
►►ಜಾನುವಾರ ಸಾಗಾಟಗಾರರ ಮೇಲೆ ಹಲ್ಲೆ: ಆರೋಪಿಗಳ ಬಂಧನ http://bit.ly/2IUiRex
►►ಕೇರಳದಲ್ಲಿ ನಿಪಾಹ್ ವೈರಸ್ ಗೆ 13 ಮಂದಿ ಬಲಿ. ಹೇಗೆ ಹರಡುತ್ತೆ ವೈರಸ್? : http://bit.ly/2Iy4YDs

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ