ಕಾಡಿನಿಂದ ನಾಡಿಗೆ ಬಂದು ಬೀದಿಯಲ್ಲಿ ಓಡಾಡಿದ ಒಂಟಿ ಆನೆ: ಜನರಲ್ಲಿ ಆತಂಕ

ರವಿತೇಜ ಕಾರವಾರ/ ಕರಾವಳಿ ಕರ್ನಾಟಕ ವರದಿ

ಕಾರವಾರ
: ಕಾಡಾನೆಯೊಂದು ಶುಕ್ರವಾರ ಬೆಳಗಿನ ಜಾವ ಪಟ್ಟಣಕ್ಕೆ‌ ಲಗ್ಗೆ ಇಟ್ಟು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ.

ಒಂಟಿಯಾಗಿ ಪಟ್ಟಣದಲ್ಲಿ ಸಂಚರಿಸುತ್ತಿರುವ ಕಾಡಾನೆಯನ್ನು ಕಂಡು ಸಾರ್ವಜನಿಕರಲ್ಲಿ  ಭಯದ‌ ವಾತಾವರಣ ಕೂಡ‌ ಸೃಷ್ಟಿಯಾಗಿತ್ತು.

ಧಾರವಾಡ ರಸ್ತೆಯಿಂದ ಹಳಿಯಾಳ ಪಟ್ಟಣ‌ ಪ್ರವೇಶ ಮಾಡಿರುವ ಒಂಟಿ ಸಲಗ ಸರ್ಕಾರಿ ಆಸ್ಪತ್ರೆ, ‌ಅರಣ್ಯ ಇಲಾಖೆ, ಶಿವಾಜಿ ವೃತ್ತ, ಪೋಲಿಸ್‌ ಠಾಣೆ‌ ಎದುರುಗಡೆಯಿಂದ ದುರ್ಗಾದೇವಿ ದೇವಸ್ಥಾನ ಗೇಟ್ ಪ್ರವೇಶಿಸಿ ರಾಜಾರೋಷವಾಗಿ ಸುತ್ತಾಡುತ್ತಾ  ದುರ್ಗಾನಗರದಲ್ಲಿಯೇ ಹೆಚ್ಚು ಸಮಯ ಸುತ್ತಾಡಿದೆ.

ಅದೃಷ್ಟವಶಾತ್ ಆನೆಗೆ ಮದವೇರದೆ ಇರುವುದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ಈ ಆನೆ ಬೆಳಗ್ಗೆ 6 ಗಂಟೆಗೆ ಹಳಿಯಾಳ ಪ್ರವೇಶ ಮಾಡಿದೆ‌ ಎಂದು ಹೇಳಲಾಗಿದ್ದು, ಸುಮಾರು 30 ನಿಮಿಷಗಳ ಕಾಲ ದುರ್ಗಾನಗರದಲ್ಲಿಯೇ ಕಳೆದಿದೆ.

ಬಳಿಕ ಅರಣ್ಯ ಇಲಾಖೆಯವರು ಆನೆ ಓಡಿಸಲು ಗಾಳಿಯಲ್ಲಿ‌ ಗುಂಡು ಹಾರಿಸಿ ಆನೆ ಮತ್ತೆ ಪಟ್ಟಣ ಪ್ರವೇಶ ಮಾಡದಂತೆ ಹೊರಗಿನ‌ ದಾರಿ ಹಿಡಿಯುವಂತೆ ಮಾಡಿದ್ದರಿಂದ‌ ಅದು‌ ಅಲೊಳ್ಳಿ ರಸ್ತೆ ಮಾರ್ಗವಾಗಿ ಕೃಷಿ ಜಮೀನಿನ‌ ಸಾಗಿ ಕೆಸರೊಳ್ಳಿ ಬಳಿ ಬಂದು ನಿಂತಿದೆ.


ಅರಣ್ಯ ಇಲಾಖೆ ಅಧಿಕಾರಿಗಳಾದ‌ ಆನೆಯನ್ನು ಮರಳಿ ಕಾಡಿಗೆ ಓಡಿಸಲು ಹರಸಾಹಸ ಪಡುತ್ತಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಪಕ್ಷದಲ್ಲಿ ನಿರ್ಧಾರ ಯಾರು ತೆಗೆದುಕೊಳ್ಳುತ್ತಾರೆಂದು ಗೊತ್ತಿಲ್ಲ. ಹೆಬ್ಬಾಳ್ಕರ್ ಅಸಮಾಧಾನ
 
http://bit.ly/2LBEFJy
►►ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆಗೆ ಬಳಸಿದ್ದು ಒಂದೆ ಪಿಸ್ತೂಲ್: ಎಸ್‌ಐಟಿ   http://bit.ly/2Me49xM
►►ಜೆಡಿಎಸ್ ಎಂಎಲ್‌ಸಿ ಅಪ್ಸರ್ ಆಗಾ ನಿಧನ http://bit.ly/2kYTBWT
ಇಂದು ಹೆಚ್ಚು ಓದಿದ ಸುದ್ದಿಗಳು
►►ಕೊಲ್ಲೂರು ಬಸ್-ಸ್ಕೂಟರ್ ಡಿಕ್ಕಿ: ಸವಾರ ಸಾವು
http://bit.ly/2kYq3IS
►►ಮಾಜಿ ರಾಷ್ಟ್ರಪತಿಯಿಂದ ಆರೆಸ್ಸೆಸ್ಗೆ ಸೆಕ್ಯೂಲರಿಸಂ ಪಾಠ: http://bit.ly/2sTqJTA
►►ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಇಲ್ಲ: http://bit.ly/2Jn6Gni
►►ಡಿವೈಡರ್ಗೆ ಗುದ್ದಿದ ಬೈಕ್: ಸವಾರ ಸಾವು: http://bit.ly/2JyDpt6
►►ಸುನಂದಾ ಪುಷ್ಕರ್ ಸಾವು ಪ್ರಕರಣ. ಆರೋಪಿಯಾಗಿ ಶಶಿ ತರೂರ್ ವಿಚಾರಣೆ : http://bit.ly/2JmtnIu

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ