25 ವರ್ಷಗಳ ಹಳೆಯ ಭೂ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್'ಗೆ ಕೋರ್ಟ್ ಆದೇಶ

ಕರಾವಳಿ ಕರ್ನಾಟಕ ವರದಿ

ಮೈಸೂರು
: 25 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.

ಮೂಲಗಳ ಪ್ರಕಾರ ಸಿದ್ದರಾಮಯ್ಯ ಡಿಸಿಎಂ ಆಗಿದ್ದ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ವಿಜಯನಗರ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ವಕೀಲ ಗಂಗರಾಜು, ಸಂಗಮೇಶ್ ಎಂಬುವವರು ದೂರು ದಾಖಲಿಸಿದ್ದರು. ಇದೀಗ ಈ ದೂರಿನ ಸುದೀರ್ಘ ವಿಚಾರಣೆ ಬಳಿಕ ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಸಿದ್ದರಾಮಯ್ಯ ವಿರುಧ ಎಫ್ ಐಆರ್ ದಾಖಲಿಸುವಂತೆ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಿಂದಲೂ ಕಾನೂನು ಹೋರಾಟ ಮಾಡುತ್ತಾ ಬಂದಿದ್ದಾರೆ. ವಕೀಲ ಗಂಗರಾಜು, ಸಂಗಮೇಶ್ ಎಂಬುವವರು ಐಪಿಸಿ ಸೆಕ್ಷನ್​ 120ಬಿ, 197, 166, 167, 169, 200, 417, 409, 420, 468ರಡಿ ಪ್ರಕರಣ ದಾಖಲಿಸಿದ್ದರು. ಸದ್ಯ ಲಕ್ಷ್ಮೀಪುರಂ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಲಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಕರ್ನಾಟಕದಲ್ಲಿ ನಾಯಿ ಸತ್ತರೂ ಪ್ರಧಾನಿ ಮೋದಿ ಜವಾಬ್ದಾರಿಯೇ?
http://bit.ly/2JRUivT
►►ಮಹಾಮೈತ್ರಿ ಕೂಟದ ಅಭ್ಯರ್ಥಿಯಾಗಿ ಕನ್ಹಯ್ಯಾ ಕುಮಾರ್ ಸ್ಪರ್ಧೆ? ttp://bit.ly/2K08FRZ

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ