ಬೊಲೆರೋ-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಕರಾವಳಿ ಕರ್ನಾಟಕ ವರದಿ

ಬಂಟ್ವಾಳ
: ಬೊಲೇರೊ ಜೀಪ್ -ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವಪ್ಪಿದ ಕಳವಳಕಾರಿ ಘಟನೆ ರಾತ್ರಿ ವರದಿಯಾಗಿದೆ.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ಮೊಹ್ಮದ್ ಸಫ್ವಾನ್(18) ಎಂದು ಗುರುತಿಸಲಾಗಿದೆ.

ವಿಟ್ಲ ಕಸಬಾ ಗ್ರಾಮದ ಚೆಂಡೆಗುಳಿಯ ಸಫ್ವಾನ್ ಅವರು ಕುಡ್ತಮೊಗೇರುನಿಂದ ವಿಟ್ಲದತ್ತ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಜೀಪು ಗುದ್ದಿತ್ತು. ಈ ಸಂದರ್ಭ ಸಫ್ವಾನ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಒಯ್ಯುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ