ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಕನ್ನಡದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

ಖ್ಯಾತ ನಿರ್ದೇಶಕ, ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು ರಾಜಿನಾಮೆಯಿಂದ ತೆರವಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಾಗತಿಹಳ್ಳಿ ನೇಮಕಗೊಂಡಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಕನ್ನಡದಲ್ಲಿ 13 ಚಲನಚಿತ್ರಗಳು, ಆರು ಧಾರಾವಹಿಗಳನ್ನು ನಿರ್ದೇಶಿಸಿದ್ದಾರೆ.  ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. |

 ಉಂಡೂಹೋದ ಕೊಂಡೂ ಹೋದ, ಅಮೆರಿಕ ಅಮೆರಿಕ, ಬಾನಲ್ಲೆ ಮಧುಚಂದ್ರಕ್ಕೆ, ಹೂಮಳೆ, ಸೂಪರ್ ಸ್ಟಾರ್, ಅಮೃತಧಾರೆ ಚಿತ್ರಗಳು ಜನಮನಗೆದ್ದಿವೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ