ಡಾ.ರಾಜ್ ಕುಮಾರ್ ಮೊಮ್ಮಗ ಯುವರಾಜ್ ಕುಮಾರ್‌ಗೆ ನಿಶ್ಚಿತಾರ್ಥ

ಮೈಸೂರು:‍ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಮೊಮ್ಮಗ, ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಅವರ ವಿವಾಹ ನಿಶ್ಚಿತಾರ್ಥ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದಿದೆ.

ಮೈಸೂರು ಮೂಲದ ಶ್ರೀದೇವಿ ಎಂಬುವವರ ಜೊತೆಗೆ ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಶ್ಚಿತಾರ್ಥ ಸಮಾರಂಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದರು.

ಯುವರಾಜ್ ಕುಮಾರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಶ್ರೀದೇವಿಯವರು ಈ ಹಿಂದೆ ಯುವರಾಜ್ ಕುಮಾರ್ ಅವರ ಅಣ್ಣ ವಿನಯ್ ರಾಜ್ ಕುಮಾರ್ ಅವರ 'ರನ್ ಆಂಟನಿ' ಸಿನಿಮಾದ ಪ್ರಚಾರ ಸಂಬಂಧ ಜವಾಬ್ದಾರಿ ನೋಡಿಕೊಂಡಿದ್ದರು. ರಾಜಕುಮಾರ್ ಕುಟುಂಬದ ವಜ್ರೇಶ್ವರಿ ಕಂಬೈನ್ಸ್‌ನಲ್ಲಿಯೂ ಕಾರ್ಯನಿರ್ವಹಿಸಿದ್ದರು ಎಂದು ಹೇಳಲಾಗುತ್ತಿದೆ.

ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಅವರು 7 ವರ್ಷಗಳಿಂದ ಸ್ನೇಹಿತರಾಗಿದ್ದು, ಈ ಸ್ನೇಹ ಪ್ರೀತಿಗೆ ತಿರುಗು ಇದೀಗ ಮನೆಯವರ ಒಪ್ಪಿಗೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ