ಯಾವುದೇ ಸರ್ಕಾರಿ ಶಾಲೆ ಮುಚ್ಚುವುದಿಲ್ಲ, ವಿಲೀನವನ್ನೂ ಮಾಡುವುದಿಲ್ಲ: ಸಚಿವ ಮಹೇಶ್

ಕರಾವಳಿ ಕರ್ನಾಟಕ ವರದಿ

ಕಲಬುರ್ಗಿ:
 ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಸಚಿವ ಮಹೇಶ್ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ ವಿನಃ ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಡಿಮೆ ವಿದ್ಯಾರ್ಥಿಗಳು ಇರುವ ಶಾಲೆಗಳು ಕೂಡ ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ.

ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವ ಉದ್ದೇಶ ಹೊಂದಿದ್ದೇವೆ. ಪ್ರಥಮ ಹಂತವಾಗಿ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ ಯುಕೆಜಿ ಆರಂಭಕ್ಕೆ ಚಿಂತನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಅನ್ನು ಒಂದು ಭಾಷೆಯನ್ನಾಗಿ ಕಲಿಸುವ ಚಿಂತನೆ ಹೊಂದಿದ್ದೇವೆ ಎಂದು ಎನ್. ಮಹೇಶ್ ಹೇಳಿದ್ದಾರೆ.

ಗುಣಮಟ್ಟದ ಶಿಕ್ಷಣ ಹಾಗೂ ಕ್ರೀಯಾತ್ಮಕ ಮತ್ತು ಕೌಶಲ್ಯದಾಯಕ ಶಿಕ್ಷಣ ಸಿಗುವ ವ್ಯವಸ್ಥೆ ಆಗಬೇಕು. ಹಾಗಿದ್ದರೆ ಮಾತ್ರ ಸರಕಾರಿ ಶಾಲೆಗಳಲ್ಲಿ ಬದಲಾವಣೆ ತರಬಹುದು.  ಈ ನಿಟ್ಟಿನಲ್ಲಿಯೇ ಪ್ರಯತ್ನಗಳನ್ನು ನಡೆಸಲಾಗಿದೆ.  ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ,  ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಮಹೇಶ್ ತಿಳಿಸಿದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ