ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸಿದ್ದರಾಮಯ್ಯ: ರಾಷ್ಟ್ರ ರಾಜಕಾರಣದತ್ತ ಮಾಜಿ ಸಿಎಂ

ಕರಾವಳಿ ಕರ್ನಾಟಕ ವರದಿ

ನವದೆಹಲಿ
: ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಗೆ ಮೇಜರ್ ಸರ್ಜರಿ ಮಾಡಿರುವ ರಾಹುಲ್ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮಿತಿಯಲ್ಲಿ ಸ್ಥಾನ ನೀಡಿದ್ದು ಈ ಮೂಲಕ ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದ ನಾಯಕನನ್ನಾಗಿ ಬಿಂಬಿಸಿದೆ.

ಕಾಂಗ್ರೆಸ್ ಕಾರ್ಯಾಕಾರಿ ಸಮಿತಿಯಗೆ ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದಾರೆ. ಸೋನಿಯಾಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮೋತಿಲಾಲ್ ವೋರಾ, ಗುಲಾಂ ನಬಿ ಆಜಾದ್, ಅಂಬಿಕಾ ಸೋನಿ, ಅಹ್ಮದ್ ಪಟೇಲ್, ಸಿದ್ದರಾಮಯ್ಯ ಸೇರಿದಂತೆ ಒಟ್ಟು 23 ಸದಸ್ಯರನ್ನು ನೇಮಕ ಮಾಡಲಾಗಿದೆ.

ಮೊದಲ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಜುಲೈ 22ರಂದು ನಡೆಯಲಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ