ನೊಯ್ಡಾ: ನಿರ್ಮಾಣ ಹಂತದ 2 ಕಟ್ಟಡಗಳು ಕುಸಿತ; 3 ಸಾವು

ನವದೆಹಲಿ: ಗ್ರೇಟರ್ ನೊಯ್ಡಾದ ಶಾಹ್'ಬೆರಿ ಗ್ರಾಮದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಕಟ್ಟಡ ಕುಸಿದು ಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು (ಎನ್'ಡಿಆರ್'ಎಫ್) ಸ್ಥಳಕ್ಕೆ ಧಾವಿಸಿದ್ದು, ಭಾರೀ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕಾರ್ಯಾಚರಣೆ ವೇಳೆ ಈವರೆಗೂ ಮೂರು ಮೃತದೇಹಗಳನ್ನು ಹೊರೆ ತೆಗೆದಿದ್ದಾರೆ.

ಕಟ್ಟಡ ಕುಸಿತ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಕಟ್ಟಡದಲ್ಲಿದ್ದರು ಎಂದು ಹೇಳಲಾಗುತ್ತಿದ್ದು, ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿವೆ.

ಈ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಎನ್'ಡಿಆರ್'ಎಫ್ ಪಡೆ ಜೊತೆಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಜಿಲ್ಲಾ ಪೊಲೀಸರಿಗೆ ಸೂಚಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ