ಉಡುಪಿಯ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಸ್ವಾಮಿ ನಿಧನ

ಕರಾವಳಿ ಕರ್ನಾಟಕ ವರದಿ

ಉಡುಪಿ:
ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ  ವಿಧಿವಶರಾಗಿದ್ದಾರೆ.

ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ಶ್ರೀಗಳ ನ್ನು ದಾಖಲಿಸಲಾಗಿತ್ತು. ಅದಾಗಲೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಶ್ರೀಗಳನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. 

ಕಳೆದ ಕೆಲ ತಿಂಗಳುಗಳಿಂದ ಶಿರೂರು ಶ್ರೀ ಆಗಾಗ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು.ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ  ಆಸ್ಪತ್ರೆಗಳಿಗೆ ಆಗಾಗ ತೆರಳುತ್ತಿದ್ದ ಶ್ರೀಗಳ ಆರೋಗ್ಯ ಸ್ಥಿತಿ ದಿನದಿನೇ ಬಿಗಡಾಯಿಸುತ್ತಲಿತ್ತು.

ಚುನಾವಣೆ ಸಂದರ್ಭ ನಿರ್ಜಲೀಕರದಿಂದ ಅಸ್ವಸ್ಥರಾಗಿದ್ದರು. ನಿನ್ನೆ ಬೆಳಗ್ಗೆ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ