ಅಜ್ಜರಿಗೆ 50ಲಕ್ಷ ಕೊಟ್ರೆ ಮ್ಯಾಟರ್ ಫಿನಿಶ್: ಶಿರೂರು ಶ್ರೀಗಳ ಆಡಿಯೋದ ಅಜ್ಜರು ಯಾರು?

ಕರಾವಳಿ ಕರ್ನಾಟಕ ವರದಿ

ಉಡುಪಿ
: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿದ್ದು ಎನ್ನಲಾದ ಆಡಿಯೊ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು ಮಾತನಾಡಿದ್ದಾರೆ. ಈ ಆಡಿಯೊದಲ್ಲಿ ಸೋದೆ ಸ್ವಾಮೀಜಿ ವಿಶ್ವವಲ್ಲಭ ತೀರ್ಥರ ಹೆಸರು ಪ್ರಸ್ತಾಪ ಮಾಡಿದ್ದಾರೆ.

ಅವರ ಎಂಟು ಸಾವಿರ ಭಕ್ತರಿಂದ ಪ್ರತಿ ಮನೆಯಿಂದ ಒಂದು ಪವನ್ ಚಿನ್ನ ಒಟ್ಟುಗೂಡಿಸ್ತಾರಂತೆ ಎನ್ನಲಾಗಿರುವ ಆಡಿಯೊದಲ್ಲಿ ಅಜ್ಜರು ಯಾರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಯಾರಿಗೆ ಈ ಆಡಿಯೋ ಕಳುಹಿಸಿದ್ದಾರೋ ಎಂಬ ಬಗ್ಗೆ ಮಾಹಿತಿಯಿಲ್ಲ.

ಪಟ್ಟದ ದೇವರನ್ನು ಮರಳಿ ನೀಡುವ ವಿಚಾರದಲ್ಲಿ ವ್ಯವಹಾರ ಮಾತುಕತೆ ನಡೆದಿತ್ತಾ? ಅಥವಾ ಯಾವುದೊ ಮಹತ್ವದ ಯೋಜನೆಗೆ ಹಣ ಸಂಗ್ರಹಿಸುವ ಬಗ್ಗೆ ನಡೆದ ಮಾತುಕತೆಯೋ ಸ್ಪಷ್ಟವಾಗಿಲ್ಲ. ಆಡಿಯೊದ ಮೂಲ ತನಿಖೆ ಮಾಡಿದ್ರೆ ಸಾಕಷ್ಟು ವಿಚಾರ ಬೆಳಕಿಗೆ ಬರುವ ಸಾಧ್ಯತೆ ಇದೆ.

 
ಆಗ ನೋಡಿದೆ ನಿನ್ನ ವಾಟ್ಸಪ್…
ಭಾರಿ ಖುಷಿ ಆಯ್ತು.
ಅಜ್ಜರದ್ದು ಒಂದು ಡಿಮ್ಯಾಂಡ್ ಉಂಟು ಮಾರಾಯಾ.
ಅವರಿಗೆ ಒಂದು ಕೋಟಿ ಕೊಡಬೇಕಂತೆ.
ಐವತ್ತು ಲಕ್ಷ ಪಲಿಮಾರು ಸ್ವಾಮೀಜಿಗೆ ಕೊಡಬೇಕಂತೆ.
ಐವತ್ತು ಲಕ್ಷ ಅವರಿಗೆ (ಪೇಜಾವರ?) ಬೇಕಂತೆ.
ಆಮೇಲೆ ಈ ಮ್ಯಾಟರ್ ಫಿನೀಷ್ ಅಂತೆ.

ಆಮೇಲೆ ಏನೂಂತ ಅಂದ್ರೆ… ಕರ್ನಾಟಕದಲ್ಲಿ ಸೋದೆ ಮಠದ ಶಿಷ್ಯಂದಿರ ಒಟ್ಟು ಎಂಟು ಸಾವಿರ ಮನೆ ಉಂಟಂತೆ. ಎಂಟು ಸಾವಿರ ಮನೆಗೆ ಒಂದೊಂದು ಮನೆಯಿಂದ ಒಂದೊಂದು ಪವನ್ ಚಿನ್ನ ವ್ಯವಸ್ಥೆ ಮಾಡಿ ಕೊಡುತ್ತೇನೆ ಅಂತ ಹೇಳಿದ್ದಾನೆ. ವಿಶ್ವವಲ್ಲಭ (ಸೋದೆ ಮಠಾಧೀಶರು) ಹೇಳಿದ್ದಾನೆ. ಅದನ್ನು ಇವರು ಬೇಡುತ್ತಿದ್ದಾರೆ.

ವಿಷಯ ಇವತ್ತು ಬೆಳಗ್ಗೆ ಗೊತ್ತಾಯ್ತು. ಇಷ್ಟೇ ವಿಷಯ, ಎಲ್ಲರಿಗೂ ತಿಳಿಸು ಆಯ್ತಾ ಎಂದು ಆಡಿಯೊದಲ್ಲಿ ಹೇಳಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ