ಗೌರಿ ಲಂಕೇಶ್ ಹತ್ಯೆ: ಕೊಕ್ಕಡದ ವ್ಯಕ್ತಿ ಪೊಲೀಸ್ ವಶ?

ಕರಾವಳಿ ಕರ್ನಾಟಕ ವರದಿ

ಉಪ್ಪಿನಂಗಡಿ:
ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ಪೊಲೀಸ್ ತಂಡವು ಬೆಳ್ತಂಗಡಿ ಕೊಕ್ಕಡದ ಜಯರಾಮ ಎಂಬಾತನನ್ನು ವಶಕ್ಕೆ ಪಡೆದು ಷರತ್ತಿನ ಮೇಲೆ ಬಿಡುಗಡೆಗೊಳಿಸಿದ್ದಾರೆ ಎನ್ನಲಾಗಿದೆ.

ಜಯರಾಮ ಯಾನೆ ಪೊಡಿಯ ಹಲವು ವರ್ಷಗಳಿಂದ ಸನಾತನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಉಪ್ಪಿನಂಗಡಿ ಪೊಲೀಸರು ಬಂಧನವನ್ನು ದೃಢಪಡಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ