ರಾಮಚಂದ್ರಾಪುರ ಮಠ ಪ್ರಕರಣ: ಪತ್ರಕರ್ತ ಪಾರ್ವತೀಶ್‌ಗೆ ಜಾಮೀನು

ಕರಾವಳಿ ಕರ್ನಾಟಕ ವರದಿ

ಪುತ್ತೂರು:
ಗೌರಿ ಲಂಕೇಶ್ ಪತ್ರಿಕೆಯಲ್ಲಿ 2015ರಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ವಿರುದ್ಧ ಅವಹೇಳನಕಾರಿ ಲೇಖನ ಬರೆದಿದ್ದಾರೆ ಎಂಬ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಖ್ಯಾತ ಪತ್ರಕರ್ತ ಮತ್ತು ವಿಚಾರವಾದಿ ಪಾರ್ವತೀಶ್ ಬಿಳಿದಾಳೆ(ಈಶ) ಅವರಿಗೆ ಪುತ್ತೂರು ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ಕೇಶವ ಕೃಷ್ಣ ಎಂಬವರು ಗೌರಿ ಲಂಕೇಶ್ ಮತ್ತು ಪಾರ್ವತೀಶ್ ಅವರ ವಿರುದ್ಧ ನ್ಯಾಯಾಲಯದಲ್ಲಿ  ಖಾಸಗಿ ದಾವೆ ಹೂಡಿದ್ದು, ಈ ಪ್ರಕರಣದ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಪುತ್ತೂರು ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿತ್ತು.

ಪ್ರಕರಣದ ತನಿಖೆ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿಯನ್ನು ಫಿರ್ಯಾದಿದಾರ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳ ವಿರುದ್ಧ ಸೆಕ್ಷನ್ 295(ಎ) 153,505 ಅನ್ವಯ ಪ್ರಕರಣ ದಾಖಲಿಸಿ ಸಮನ್ಸ್ ಜಾರಿಗೊಳಿಸಿತ್ತು.

ಗೌರಿ ಲಂಕೇಶ್ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದರು. ಪಾರ್ವತೀಶ್ ಅವರು ಜಾಮೀನು ಪಡೆದಿರದ ಹಿನ್ನೆಲೆಯಲ್ಲಿ ಶನಿವಾರ ಪುತ್ತೂರು ಕೋರ್ಟಿಗೆ ಹಾಜರಾಗಿದ್ದರು.

ನ್ಯಾಯವಾದಿಗಳಾದ ಅಶ್ರಫ್ ಕೆ.ಅಗ್ನಾಡಿ, ಅಬ್ದುಲ್ ಮಜೀದ್ ಖಾನ್ ಹಾಗೂ ಮುಸ್ತಫಾ ಕಡವ ಅವರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ