ಶಿರೂರು ಸ್ವಾಮೀಜಿ ನಿಗೂಢ ಸಾವು ಪ್ರಕರಣ: ಮಾಧ್ಯಮ ಸುದ್ದಿ ತಡೆಗೆ ಹೈಕೋರ್ಟ್ ನಕಾರ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳ ಸುದ್ದಿ ಪ್ರಸಾರಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಆಧಾರ ರಹಿತ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ/ಪ್ರಸಾರ ಮಾಡದಂತೆ ನಿರ್ದೇಶನ ನೀಡಬೇಕೆಂದು ಉಡುಪಿ ಅಷ್ಟಮಠದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಚ್. ವಿ.ಗೌತಮ ಮತ್ತು ಧಾರ್ಮಿಕ ಪರಿಣತ ಬಿ. ರಾಮಚಂದ್ರ ಉಪಾಧ್ಯಾಯ ಅವರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅರವಿಂದ ಕುಮಾರ್ ಏಕಸದಸ್ಯ ಪೀಠದಲ್ಲಿ ಸೋಮವಾರ ನಡೆಯಿತು.

ಹಿರಿಯ ನ್ಯಾಯವಾದಿ ಬಿ.ವಿ.ಆಚಾರ್ಯ ಅವರು ಅರ್ಜಿದಾರರ ಪರ ವಾದ ಮಂಡಿಸಿ, ಮಾಧ್ಯಮಗಳು ಪರ್ಯಾಯ ತನಿಖೆ ನಡೆಸಿ ಶಿಕ್ಷೆಯನ್ನೂ ಘೋಷಿಸುತ್ತಿವೆ. ಶಿಕ್ಷೆಯ ಅನುಷ್ಠಾನವೊಂದೇ ಬಾಕಿ ಎಂಬಂತೆ ಹದ್ದು ಮೀರಿ ವರ್ತಿಸುತ್ತಿವೆ. ಆಧಾರರಹಿತವಾಗಿ ಅರ್ಧಗಂಟೆಗೊಮ್ಮೆ ಬ್ರೇಕಿಂಗ್ ನ್ಯೂಸ್ ಬಿತ್ತರಿಸುತ್ತಿವೆ. ಆದ್ದರಿಂದ ಸ್ವಾಮೀಜಿ ಸಾವಿಗೆ ಸಂಬಂಧಿಸಿದ ಸುದ್ದಿಗಳ ಪ್ರಸಾರಕ್ಕೆ ಮಧ್ಯಂತರ ತಡೆ ನೀಡಬೇಕು. ತನಿಖಾಧಿಕಾರಿಗಳೂ ಕೂಡ ಪ್ರಕರಣದ ತನಿಖೆ ಮುಗಿಯುವ ತನಕ ಮಾಧ್ಯಮಗಳಿಗೆ ಸುದ್ದಿ ನೀಡಕೂದದು ಎಂದು ಕೋರಿದರು.

ಪ್ರತಿವಾದಿಗಳಾದ ಖಾಸಗಿ ಟಿವಿ ವಾಹಿನಿಗಳು, ವಾರ ಪತ್ರಿಕೆಗಳು, ಕನ್ನಡ ಮತ್ತು ಆಂಗ್ಲ ದೈನಿಕಗಳು, ಅಂತರ್ಜಾಲ ಸುದ್ದಿ ತಾಣಗಳ ಸಂಪಾದಕರು ಮತ್ತು ರಾಜ್ಯ ಗೃಹ ಕಾರ್ಯದರ್ಶಿಗೆ ತುರ್ತು ನೋಟೀಸ್ ಜಾರಿ ಮಾಡಲು ನ್ಯಾಯಪೀಠವು ಆದೇಶಿಸಿದ್ದು, ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ