ಕಾಗೋಡು ತಿಮ್ಮಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಸಮಾಜವಾದಿ ಚಳುವಳಿಯ ಮುಂಚೂಣಿ ನಾಯಕ, ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಇನ್ನು ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಬೇರೆ ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಕೊಳ್ಳುವೆ. ಮಾಡಿದ ಕೆಲಸಗಳ ಬಗ್ಗೆ ಸಮಾಧಾನವಿದೆ. ವಯಸ್ಸೂ ಆಗಿದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಸಿದ್ದರಾಮಯ್ಯ  ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಸ್ಪೀಕರ್ ಹಾಗೂ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಕಾಗೋಡು ಅವರು ಖಡಕ್ ತೀರ್ಮಾನಗಳಿಗೆ ಹೆಸರಾಗಿದ್ದರು.

ಇದೀಗ ತಮ್ಮ ಐವತ್ತೈದು ವರ್ಷಗಳ ಸುದೀರ್ಘ ಜನಪರ ರಾಜಕೀಯಕ್ಕೆ ವಿದಾಯ ಹೇಳಿ ಇತರ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಪರ ಕೆಲಸ ಮುಂದುವರಿಸುವ ಇರಾದೆ ಮುತ್ಸದ್ದಿ ರಾಜಕಾರಣಿ ಎಂದೇ ಖ್ಯಾತಿವೆತ್ತ ಕಾಗೋಡು ತಿಮ್ಮಪ್ಪ ಅವರದಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ