ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಪದೋನ್ನತಿಗೆ ಕೊನೆಗೂ ಕೇಂದ್ರ ಸಮ್ಮತಿ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರಿಗೆ ಪದೋನ್ನತಿ ನೀಡಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಮಾಡಬೇಕು ಎಂಬ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಒಪ್ಪಿದೆ. ಹಿಂದೆ ಕೊಲಿಜಿಯಂ ತೀರ್ಮಾನವನ್ನು ತಿರಸ್ಕರಿಸಿದ್ದ ಸರಕಾರ ಈಗ ಸಮ್ಮತಿಸಿರುವುದರಿಂದ ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸೇರಿದಂತೆ ಕುರಿಯನ್ ಜೋಸೆಫ್, ಎ.ಕೆ.ಸಿಖ್ರಿ, ರಂಜನ್ ಗೊಗೊಯ್, ಮದನ್ ಬಿ. ಅವರ ಕೊಲಿಜಿಯಂ ಸುರ್ಪೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ  ಹೆಸರನ್ನು ಶಿಪಾರಸು ಮಾಡಿತ್ತು.

ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರ ಹೆಸರನ್ನು ಜನವರಿ1o ರಂದು ಪ್ರತ್ಯೇಕವಾಗಿ ಶಿಪಾರಸು ಮಾಡಲಾಗಿತ್ತು.

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿನಿತ್ ಶರಣ ಅವರು ಕೂಡ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ