ರಾಜಾಜಿ ಹಾಲ್‍ನಲ್ಲಿ ಕರುಣಾನಿಧಿ ಪಾರ್ಥಿವ ಶರೀರ: ಅಂತಿಮ ದರ್ಶನ

ಕರಾವಳಿ ಕರ್ನಾಟಕ ವರದಿ

ಚೆನ್ನೈ:
ಮಂಗಳವಾರ ಸಂಜೆ 6 ಗಂಟೆ 10 ನಿಮಿಷಕ್ಕೆ ನಿಧನರಾದ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.

ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರುತ್ತಿದ್ದಾರೆ.

ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೆ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುಣಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದರು.

ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್‌ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ