ಮಧ್ಯಪ್ರದೇಶ್, ರಾಜಸ್ಥಾನ್, ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸಮೀಕ್ಷೆ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಈ ವರ್ಷಾಂತ್ಯದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ತಿಳಿಸಿದೆ. ಸಿವೋಟರ್​ ಮತ್ತು ಎಬಿಪಿ ನ್ಯೂಸ್​ ಸಮೀಕ್ಷೆಯಲ್ಲಿ ಕಾಂಗ್ರೆಸ್​ಗೆ ಈ ಮೂರು ರಾಜ್ಯಗಳ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಯ ಪ್ರಕಾರ, ಮೂರು ರಾಜ್ಯಗಳಲ್ಲಿಯೂ ಕಾಂಗ್ರೆಸ್​ ಸ್ಪಷ್ಟ ಬಹುಮತ ಹೊಂದುವ ಮೂಲಕ ಅಧಿಕಾರಕ್ಕೆ ಬರಲಿದೆ. ಮಧ್ಯಪ್ರದೇಶದಲ್ಲಿ 230ಕ್ಕೆ 117 ಸ್ಥಾನ, ಛತ್ತೀಸ್​ಗಢದಲ್ಲಿ 90ರಲ್ಲಿ 54 ಸ್ಥಾನ ಹಾಗೂ ರಾಜಸ್ಥಾನದಲ್ಲಿ 200ಕ್ಕೆ 130 ಸ್ಥಾನಗಳನ್ನು ಕಾಂಗ್ರೆಸ್​ ಪಡೆದುಕೊಳ್ಳಲಿದೆ ಎನ್ನಲಾಗಿದೆ.

ಸಿವೋಟರ್​ ಮತ್ತು ಎಬಿಪಿ ನ್ಯೂಸ್​ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 28,000 ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅತ್ಯಂತ ದೊಡ್ಡ ಲಾಭವಾಗಲಿದೆ. ಕಾಂಗ್ರೆಸ್​ಗೆ ಶೇ. 51 ಮತಗಳು ಲಭಿಸಲಿದ್ದು, ಬಿಜೆಪಿ ಶೇ. 37ರಷ್ಟು ಮತಗಳನ್ನು ಪಡೆಯಲಿದೆ. 2013ರ ಚುನಾವಣೆಯಲ್ಲಿ ಬಿಜೆಪಿ 163 ಸೀಟುಗಳನ್ನು ಹೊಂದುವ ಮೂಲಕ ರಾಜಸ್ಥಾನದಲ್ಲಿ ಜಯಭೇರಿ ಬಾರಿಸಿತ್ತು. ಅದು ಈ ಬಾರಿ ಉಲ್ಟಾ ಆಗಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಶೇ. 42 ಸೀಟು ಮತ್ತು ಬಿಜೆಪಿಗೆ ಶೇ. 40 ಸೀಟುಗಳು ದೊರೆಯಲಿವೆ ಎನ್ನಲಾಗಿದೆ.

ಛತ್ತೀಸ್​ಗಢದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿಗೆ ತೀವ್ರ ಪೈಪೋಟಿ ಏರ್ಪಡಲಿದೆ. ಬಿಜೆಪಿ ಶೇ. 39 ಮತಗಳನ್ನು ಪಡೆದುಕೊಂಡರೆ ಕಾಂಗ್ರೆಸ್​ ಶೇ. 40ರಷ್ಟು ಮತಗಳನ್ನು ಪಡೆಯುವ ಮೂಲಕ ಅತ್ಯಂತ ಕಡಿಮೆ ಅಂತರದಲ್ಲಿ ಗೆಲುವು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ