ಯಡಿಯೂರಪ್ಪಗೆ ವಯಸ್ಸಾಗಿದೆ, ಶೋಭಾ ಕೂಡ ಅವರ ಮಾತು ಕೇಳಲ್ಲ: ದಿನೇಶ್ ಗುಂಡೂರಾವ್

ಕರಾವಳಿ ಕರ್ನಾಟಕ ವರದಿ

ಉಡುಪಿ:
ಬಿ.ಎಸ್.ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಹೀಗಾಗಿ ಅವರ ಮಾತುಗಳನ್ನು ಸಂಸದೆ ಶೋಭಾ ಕರಂದ್ಲಾಜೆ ಕೇಳುತ್ತಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಟೀಕಾಪ್ರಹಾರಗೈದಿದ್ದಾರೆ. ಶೋಭಾ ತಮ್ಮ ಕ್ಷೇತ್ರವನ್ನೇ ಮರೆತಿದ್ದಾರೆ. ಸಂಸದೆಯಾಗಿ 5 ವರ್ಷಗಳಿಂದ ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಿಲ್ಲ. ಯಾರಾದರೂ ಮೃತಪಟ್ಟಾಗ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆ ಎಂದು ಶೋಭಾ ಅವರ ಕಾರ್ಯವೈಖರಿಯನ್ನು ದಿನೇಶ್ ಗೇಲಿ ಮಾಡಿದ್ದಾರೆ.

ಶೋಭ ಕರಂದ್ಲಾಜೆ ಓರ್ವ ಕೀಳುಮಟ್ಟದ ರಾಜಕಾರಣಿಯಾಗಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ನಾಯಕರು ಬರಿ ಸುಳ್ಳು ಹೇಳುವುದನ್ನೇ ರೂಢಿಸಿಕೊಂಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ  ಸ್ಪರ್ಧಿಸುವುದಿಲ್ಲ. ಯಾವಾಗಲೂ ಕ್ಷೇತ್ರ ಬದಲಾಯಿಸುತ್ತಲೇತ್ತಲೇ ಬಂದಿದ್ದಾರೆ. ಈ ಬಾರಿಯೂ ಹಾಗೆಯೆ ಅಗಲಿದೆ ಎಂದು ದಿನೇಶ್ ಗುಂಡೂರಾವ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ