ಈಗಲೇ ಮುಖಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ನಾನು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದು ನಿಜ, ಆದರೆ ಅದರರ್ಥ ಈಗಲೇ ಆಗುತ್ತೇನೆ ಎಂದಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ನಾನು ಮತ್ತೆ ಜನರ ಆಶೀರ್ವಾದ ಗಳಿಸಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರುತ್ತೀನಿ ಎಂಬುದಾಗಿ ಹೇಳಿದ್ದೆ ವಿನಃ ಈಗಲೇ ಮುಖಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಹಾಸನದಲ್ಲಿ ಸಭೆಯೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ನಾನು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದರು. ಬಳಿಕ ಈ ಹೇಳಿಕೆ ವಿವಾದಕ್ಕೆ ಎಡೆಮಾಡಿತ್ತು. ಸಿದ್ದರಾಮಯ್ಯ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ "ಆಗಲಿ ಬಿಡಿ, ಸಂತೋಷ" ಎಂದಷ್ಟೆ ಹೇಳಿದ್ದರು.

"ನಾನು ಮುಖ್ಯಮಂತ್ರಿಯಾಗಲೇಬೇಕು ಎಂಬ ಹಠ ಹಿಡಿದು ಆಗಿಲ್ಲ. ಪರಿಸ್ಥಿತಿಯ ಅನಿವಾರ್ಯತೆ ನನ್ನನ್ನು ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೇರಿಸಿದೆ. ಇನ್ಯಾರೋ" ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಧ್ಯಮದಲ್ಲಿ ಸುದ್ದಿ ಬಂದಿದೆ. ಅದಕ್ಕೆಲ್ಲಾ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಅಧಿಕಾರದಲ್ಲಿರುವಷ್ಟು ದಿನ ನಾನು ಏನು ಕೆಲಸ ಮಾಡಬೇಕು ಎಂಬುದು ಗೊತ್ತಿದೆ, ಅಷ್ಟನ್ನು ಮನಸ್ಪೂರ್ವಕವಾಗಿ ಮಾಡುತ್ತೇನೆ" ಎಂದು ಕುಮಾರಸ್ವಾಮಿ ಹೇಳಿದದ್ದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ