ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ 846 ಬಿಜೆಪಿಗೆ 778 ಸ್ಥಾನ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
:ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್  846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.

2664 ಸ್ಥಾನಗಳ ಪೈಕಿ  2267 ಸ್ಥಾನಗಳ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು,  ಕಾಂಗ್ರೆಸ್ 846 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಬಿಜೆಪಿ 788 ಹಾಗೂ ಜೆಡಿಎಸ್ 307 ಸ್ಥಾನಗಳಲ್ಲಿ ಜಯ ಗಳಿಸಿದ್ದರೆ ಉಳಿದ  ಸ್ಥಾನಗಳಲ್ಲಿ ಸ್ವತಂತ್ರ  ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

ರಾಜ್ಯದ ಮೂರು ನಗರ ಪಾಲಿಕೆಯ  135 ವಾರ್ಡ್, 29 ನಗರ, 53  ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಯ ಒಟ್ಟು 2, 529 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಈ ಹಿಂದೆ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಲಾಗಿತ್ತು.

ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಕೊಡಗು ಜಿಲ್ಲೆಯ  ಮೂರು ಕಡೆಗಳಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ