ಸೆಪ್ಟಂಬರ್ 5: ಕುಂದಾಪುರದಲ್ಲಿ ಗೌರಿ ಲಂಕೇಶ್ ಸ್ಮರಣೆ

ಕರಾವಳಿ ಕರ್ನಾಟಕ ವರದಿ

ಕುಂದಾಪುರ:
ಕಳೆದ ವರ್ಷ ಬೆಂಗಳೂರಿನ ತಮ್ಮ ನಿವಾಸದ ಸಮೀಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಸಂಸ್ಮರಣಾ ಕಾರ್ಯಕ್ರಮವು ಗೌರಿ ಬಳಗ ಕುಂದಾಪುರದ ವತಿಯಿಂದ ಸೆಪ್ಟೆಂಬರ್ 5ರಂದು ಸಂಜೆ 6ಗಂಟೆಗೆ ಕುಂದಾಪುರದ ಶಾಸ್ತ್ರಿ ಸರ್ಕಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಲಿದ್ದಾರೆ.

ಗೌರಿ ಅಭಿಮಾನಿಗಳು ಹಾಗೂ ಸಮಾನ ಮನಸ್ಕ ಸ್ನೇಹಿತರು ಈ ಕಾರ್ಯಕ್ರಮದಲ್ಲಿ ಬಾಗವಹಿಸಬೇಕೆಂದು ಕಾರ್ಯಕ್ರಮದ ಸಂಚಾಲಕ, ಪತ್ರಕರ್ತ ರಾಮಕೃಷ್ಣ ಹೇರ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ