ಸೌದಿ: ಅಪಘಾತದಲ್ಲಿ ಬ್ರಹ್ಮಾವರದ ಯುವಕ ಸಾವು

ಕರಾವಳಿ ಕರ್ನಾಟಕ ವರದಿ

ಉಡುಪಿ:
ಸೌದಿ ಅರೇಬಿಯಾದ ಜುಬೈಲ್ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬ್ರಹ್ಮಾವರ ಹೊನ್ನಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಝಾಕಿರ್ ಎಂದು ಗುರುತಿಸಲಾಗಿದೆ. ಝಾಕಿರ್ ಅವರು ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ತಿಂಗಳಲ್ಲಿ ಸಂಬಂಧಿಕರೋರ್ವರ ಮದುವೆಗೆ ಊರಿಗೆ ಬಂದು ಸೌದಿಗೆ ಮರಳಿದ್ದರು ಎಂದು ತಿಳಿದುಬಂದಿದೆ.

ಝಾಕಿರ ಅವರು ಹದಿನೈದು ವರ್ಷಗಳಿಂದ ಸೌದಿಯಲ್ಲಿ ಉದ್ಯೋಗಿಯಾಗಿದ್ದು, ನಾಲ್ಕು ವರ್ಷಗಳಿಂದ ಕೃಷ್ಣಾಪುರ ಚೊಕ್ಕಬೆಟ್ಟು ಎಂಬಲ್ಲಿ ವಾಸವಾಗಿದ್ದರು.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ