ಕ್ಯಾಂಟರ್- ಕಾರು ಮುಖಾಮುಖಿ ಡಿಕ್ಕಿ: 3 ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಸಂಭವಿಸಿದ ಅಪಘಾತದಲ್ಲಿ  ಬೆಂಗಳೂರಿನ ಕಿಮ್ಸ್ ನ ಮೂವರು ವೈದ್ಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶಾಲ್, ಪ್ರಜ್ವಲ್, ಭೂಷಣ್ ಮೃತ ದುರ್ದೈವಿಗಳು,  ಸಂಬಂಧಿಕರ ಆಕ್ರಂದನ ಮುಗಿಲು ಮಟ್ಟಿದ್ದು ಏರ್ ಪೋರ್ಟ್   ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ