ಬಂಟ್ವಾಳ: ಅಂಚೆ ಪೇದೆ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ

ಪುತ್ತೂರು
: ಬಂಟ್ವಾಳ ಅಂಚೆ ಕಚೇರಿಯಲ್ಲಿ ತಾತ್ಕಾಲಿಕ ಉದ್ಯೋಗದಲ್ಲಿದ್ದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಕಳವಳಕಾರಿ ಘಟನೆ ವರದಿಯಾಗಿದೆ. ಕೆದಿಲ ಗ್ರಾಮದ ಪೇರಮೊಗ್ರು ನಿವಾಸಿ ಪೂವಪ್ಪ ಪೂಜಾರಿ ಎಂಬವರ ಮಗ ನವೀನ್ ಕುಮಾರ್(34) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬುಧವಾರ ಬೆಳಿಗ್ಗೆ ನವೀನ್ ನಾಪತ್ತೆಯಾಗಿದ್ದು, ಅವರಿಗಾಗಿ ಮನೆಯವರು ಹುಡುಕಿದ ಸಂದರ್ಭ ಮೃತದೇಹವು ಮನೆ ಸಮೀಪದ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.

ನವೀನ್ ಅವಿವಾಹಿತರಾಗಿದ್ದರು. ಕಳೆದ ಎಂಟು ವರ್ಷಗಳಿಂದ ಪೇರಮೊಗ್ರು ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.

ಮೃತರ ಸಹೋದರ ಮನೋಜ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ