ಚುನಾವಣಾ ರಾಜಕೀಯಕ್ಕೆ ಶಾಸಕ ಆನಂದ್ ಸಿಂಗ್ ವಿದಾಯ!

ಕರಾವಳಿ ಕರ್ನಾಟಕ ವರದಿ

ಬಳ್ಳಾರಿ:
ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂದ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಇಂದು ಹೊಸಪೇಟೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು, ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇನ್ನು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದರು.

ನನ್ನ ಹೇಳಿಕೆಯಿಂದ ಯಾರೂ ಗಾಬರಿಯಾಗೋದು ಬೇಡ. ರಾಜಕೀಯದಲ್ಲಿ ಸಕ್ರಿಯನಾಗಿಯೇ ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಾಳಜಿ ಇರುವವರಿಗೆ ಅವಕಾಶ ಸಿಗಲಿ ಎಂದರು.

ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಆನಂದ್ ಸಿಂಗ್, ಬಿಜೆಪಿ ಸರ್ಕಾರದಲ್ಲಿ ಸಚಿವರೂ ಆಗಿದ್ದರು. ಪಕ್ಷದಲ್ಲಿ ನನ್ನನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಬಿಟ್ಟಿದ್ದರು. ನಂತರ ಕಾಂಗ್ರೆಸ್ ಸೇರಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ