ಕೋಟ ‘ವಿವೇಕ’ದಲ್ಲಿ ಬ್ರಹ್ಮಾವರ ತಾ. ಮಟ್ಟದ ವಾಲಿಬಾಲ್ ಪಂದ್ಯಾವಳಿ
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಅಧ್ಯಯನದಲ್ಲಿ ಏಕಾಗ್ರತೆ ಸಾಧ್ಯ: ಪಂದ್ಯಾವಳಿ ಉದ್ಘಾಟಿಸಿ ಆನಂದ ಕುಂದರ್.

ಕರಾವಳಿ ಕರ್ನಾಟಕ ವರದಿ
ಉಡುಪಿ:
ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಕೋಟ ವಿದ್ಯಾಸಂಘ (ರಿ.), ಕೋಟ ಜಂಟಿ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟವು ವಿವೇಕ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು.

ಉದ್ಯಮಿ ಆನಂದ ಸಿ.ಕುಂದರ್ ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.  ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳು ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಆಟೋಟಗಳಲ್ಲಿ ಭಾಗವಹಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಹಾಗು ಮಾನಸಿಕ ಬೆಳವಣಿಗೆ ಸಾಧ್ಯ. ಮನಸ್ಸಿನ ಉಲ್ಲಾಸದೊಂದಿಗೆ ಅಧ್ಯಯನದಲ್ಲಿ ಲವಲವಿಕೆ ಏಕಾಗ್ರತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷರಾದ  ಪಿ.ಪ್ರಭಾಕರ ಮಯ್ಯ ವಹಿಸಿ, ಮಾತನಾಡಿ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತರೆ, ಕುಗ್ಗದೆ ಧೈರ್ಯದಿಂದ ಮುನ್ನುಗುವ ಆಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆಯಿತ್ತರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ,  ಉಪನಿರ್ದೇಶಕರಾದ ಸುಬ್ರಹ್ಮಣ್ಯ ಜೋಶಿ  ಉಪಸ್ಥಿತರಿದ್ದು, ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ  ಕೆ. ಜಗದೀಶ ನಾವಡರು ಅತಿಥಿ ಅಭ್ಯಾಗತರನ್ನು ಪರಿಚಯಿಸಿ ಸ್ವಾಗತಿಸಿದರು. ಸಂಸ್ಥೆಗಳ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ  ಉಮೇಶ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಗೌರವಾಧ್ಯಕ್ಷರಾದ, ದೈಹಿಕ ಶಿಕ್ಷಣ ಉಪನ್ಯಾಸಕರಾದ  ವಸಂತ ಶೆಟ್ಟಿ ಧನ್ಯವಾದವನ್ನಿತ್ತರು.

ವಿವೇಕ ಆಂಗ್ಲ ಮಾಧ್ಯಮ ಮುಖ್ಯೋಪಾಧ್ಯಾಯರಾದ  ಪಿ. ಶ್ರೀಪತಿ ಹೇರ್ಳೆ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಅಪರಾಹ್ನ ಬಹುಮಾನ ವಿತರಣಾ ಸಮಾರಂಭವು ಜರುಗಿತು. ಅಭ್ಯಾಗತರಾಗಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ಇದರ ಅಧ್ಯಕ್ಷರಾದ  ಭರತಕುಮಾರ ಶೆಟ್ಟಿ ಆಗಮಿಸಿದರು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ 8 ತಂಡಗಳು, ಬಾಲಕಿಯರ ವಿಭಾಗದಲ್ಲಿ 4 ತಂಡಗಳು ಭಾಗವಹಿಸಿದ್ದವು. ಬಾಲಕರ ಹಾಗು ಬಾಲಕಿಯರ ಎರಡೂ ವಿಭಾಗದಲ್ಲಿ ಅತಿಥೇಯ ಕೋಟ ವಿವೇಕ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆಯಿತು. ವಿಜೇತ ತಂಡಗಳಿಗೆ ಟ್ರೋಫಿಯನ್ನು ವಿತರಿಸಲಾಯಿತು.

ದೈಹಿಕ ಶಿಕ್ಷಣ ಉಪನ್ಯಾಸಕ  ಬಿ. ವಸಂತ ಶೆಟ್ಟಿ ಧನ್ಯವಾದವನ್ನಿತ್ತರು. ಉಪನ್ಯಾಸಕ ಶಿವಪ್ರಸಾದ ಶೆಟ್ಟಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಇದನ್ನೂ ಓದಿ:

►►ಕೋಟ ವಿವೇಕ ಕಾಲೇಜು ಸಾಹಿತ್ಯ ಸಂಘ ಉದ್ಘಾಟನೆ: http://bit.ly/2wHSNuZ

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ