ಗುಜರಾತ್: ಮಾಜಿ ಐಪಿಎಸ್ ಅಧಿಕಾರಿ ಸಂಜೀವ ಭಟ್ ಬಂಧನ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ ಸಿಐಡಿ ಬಂಧಿಸಿದೆ. ವಕೀಲರ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಿದ 22 ವರ್ಷ ಹಿಂದಿನ ಪ್ರಕರಣದಲ್ಲಿ ಗುಜರಾತ್​​ ಹೈಕೋರ್ಟ್​ ಆದೇಶದ ಮೇರೆಗೆ ಸಿಐಡಿ ಪೊಲೀಸರು ಸಂಜೀವ್​ ಭಟ್​ ಅವರನ್ನು ವಶಕ್ಕೆ ಪಡೆದಿದ್ದಾರೆ.

1996ರಲ್ಲಿ ರಾಜಸ್ಥಾನ ಮೂಲದ ವಕೀಲರೊಬ್ಬರು ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದರು ಎಂದು ಸಂಜೀವ್​​ ಭಟ್​​ ಪ್ರಕರಣ ದಾಖಿಲಿಸಿದ್ದರು. ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಸಂಜೀವ್ ಭಟ್ ಅವರನ್ನು ತನಿಖೆಗೆ ಒಳಪಡಿಸುವಂತೆ ಗುಜರಾತ್ ಹೈಕೋರ್ಟ್ ಜುಲೈನಲ್ಲಿ ಸಿಐಡಿಗೆ ಸೂಚಿಸಿದೆ.

ಗುಜರಾತ್​ನಲ್ಲಿ ನಡೆದ 2002ರ ಗಲಭೆಗೆ ಆಗ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಸರ್ಕಾರವೇ ಕಾರಣ ಎಂದು ಸಂಜೀವ್​​ ಭಟ್​ ನೇರ ಆರೋಪ ಮಾಡಿದ್ದರು. ಅಲ್ಲದೆ ಮೋದಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಕೂಡ ಸಲ್ಲಿಸಿದ್ದರು. ಈ ಕಾರಣದಿಂದಾಗಿ ಸಂಜೀವ್ ಭಟ್ ಅವರನ್ನು 2015ರಲ್ಲಿ ಭಾರತೀಯ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿತ್ತು.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ