ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಬೆಲೆ 2 ರೂ. ಇಳಿಕೆ: ಸಿಎಂ ಘೋಷಣೆ
ಪೆಟ್ರೋಲ್, ಡೀಸಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಕೋಪಗೊಂಡಿರುವ ಹೊತ್ತಲ್ಲಿ ಸಿಎಂ ಸ್ಪಂದನೆ

ಕರಾವಳಿ ಕರ್ನಾಟಕ ವರದಿ

ಕಲಬುರ್ಗಿ
: ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ತಲಾ 2 ರೂಪಾಯಿ ಇಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದೇಶಾದ್ಯಂತ ಪೆಟ್ರೋಲ್, ಡೀಸಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಕೋಪಗೊಂಡಿರುವ ಹೊತ್ತಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ಸ್ಪಂದಿಸಿದ್ದಾರೆ.

ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದನ್ನು ಸ್ಮರಿಸಬಹುದು.

ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಿಎಂ ತೈಲ ಬೆಲೆ ಇಳಿಕೆಯನ್ನು ಘೋಷಿಸಿ, ವಾಹನ ಸವಾರರಿಗೆ ಸಂತಸದ ಸುದ್ದಿಯನ್ನು ನೀಡಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2 ರಿಂದ 3 ರೂ.ನಷ್ಟು ಇಳಿಕೆಗೆ ಸಿಎಂ ನಿನ್ನೆಯೇ ಸೂಚಿಸಿದ್ದರು. ಇಂದು ಮಧ್ಯ ರಾತ್ರಿಯಿಂದ ನೂತನ ಬೆಲೆ ಅನ್ವಯವಾಗಬಹುದಾಗಿದೆ.

ಪಶ್ಚಿಮ ಬಂಗಾಳ, ರಾಜಸ್ಥಾನ ಹಾಗೂ ಆಂಧ್ರ ಪ್ರದೇಶ ಸರಕಾರಗಳು ಈಗಾಗಲೇ ತೈಲದ ಮೇಲಿನ ಸೆಸ್ ಕಡಿಮೆ ಮಾಡಿ, ಜನ ಸಾಮಾನ್ಯರಿಗೆ ಸರಕಾರಗಳು ನೆರವಾಗಿದ್ದು, ಕರ್ನಾಟಕವೂ ಅವುಗಳ ಸಾಲಿಗೆ ಇದೀಗ ಸೇರಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ