ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ!

ಕರಾವಳಿ ಕರ್ನಾಟಕ ವರದಿ

ನವದೆಹಲಿ
: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು ಸೆ.17 ರಂದು ಹಣಕಾಸು ಸಚಿವಾಲಯ ಘೋಷಿಸಿದೆ.

ಆರ್ಥಿಕ ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಸೈಸ್ ಅವರು ಬ್ಯಾಂಕ್ ಗಳ ವಿಲೀನ ಘೋಷಣೆ ಮಾಡಿದ್ದು, ವಿಲೀನಗೊಂಡ ನಂತರ ಈ ಬ್ಯಾಂಕ್ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ  ವಿತ್ತ ಸಚಿವ ಅರುಣ್ ಜೇಟ್ಲಿ, " ಬ್ಯಾಂಕ್ ಗಳ ಏಕೀಕರಣ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಕ್ರಮವನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ